INDW vs WIW: ಮಹಿಳಾ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ ಸ್ಮೃತಿ ಮಂಧಾನಾ!
ಮಂಗಳವಾರ ವೆಸ್ಟ್ ಇಂಡೀಸ್ ವಿರುದ್ಧ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಅವರು ಅರ್ಧಶತಕ ಬಾರಿಸುವ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ.

ವಡೋದರ: ವೆಸ್ಟ್ ಇಂಡೀಸ್ ವಿರುದ್ದ ಪ್ರಸ್ತುತ ನಡೆಯುತ್ತಿರುವ ಮೂರು ಪಂದ್ಯಗಳ ಮಹಿಳಾ ಏಕದಿನ ಸರಣಿಯಲ್ಲಿ (INDW vs WIW) ಭಾರತ ತಂಡದ ಆರಂಭಿಕ ಬ್ಯಾಟ್ಸ್‌ವುಮೆನ್ ಸ್ಮೃತಿ ಮಂಧಾನಾ ಅವರು ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇಲ್ಲಿನ ಕೊಟಂಬಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಅವರು ಅರ್ಧಶತಕ ಬಾರಿಸುವ ಮೂಲಕ ಮಹಿಳಾ ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವಂತಾದ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸಿದ ಸ್ಮೃತಿ ಮಂಧಾನಾ ಅವರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದರು. ಪ್ರತೀಕಾ ರಾವಲ್ ಜೊತೆಗೂಡಿ ಮುರಿಯದ ಎರಡನೇ ವಿಕೆಟ್‌ಗೆ 110 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಭಾರತ ತಂಡದ ಭರ್ಜರಿ ಆರಂಭಕ್ಕೆ ನೆರವು ನೀಡಿದ್ದರು.
ಮೊದಲನೇ ಏಕದಿನ ಪಂದ್ಯದಲ್ಲಿ 91 ರನ್‌ಗಳನ್ನು ಕಲೆ ಹಾಕಿದ್ದ ಅವರು, ಎರಡನೇ ಪಂದ್ಯದಲ್ಲಿಯೂ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಅವರು ಆಡಿದ್ದ 47 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 7 ಬೌಂಡರಿಗಳೊಂದಿಗೆ 53 ರನ್‌ಗಳನ್ನು ಕಲೆ ಹಾಕಿದ್ದರು. ಅರ್ಧಶತಕವನ್ನು ಪೂರ್ಣಗೊಳಿಸಿದ ಬಳಿಕ ಅವರುರನ್‌ಔಟ್‌ಗೆ ಬಲಿಯಾದರು. ಹರ್ಲೀನ್ ಡಿಯೋಲ್ ಶತಕದ ಬಲದಿಂದ ಭಾರತ ತನ್ನ ಪಾಲಿನ 50 ಓವರ್‌ಗಳಿಗೆ 358 ರನ್‌ಗಳನ್ನು ಕಲೆ ಹಾಕಿತ್ತು.
2⃣9⃣th ODI half-century for Smriti Mandhana! 👌 👌Her 6⃣th successive fifty-plus score in international cricket 🙌 🙌Updates ▶️ https://t.co/u2CL80qolK#TeamIndia | #INDvWI | @IDFCFIRSTBank pic.twitter.com/fOWwG3lp5t— BCCI Women (@BCCIWomen) December 24, 2024
ಇತಿಹಾಸ ಬರೆದ ಸ್ಮೃತಿ ಮಂಧಾನಾ
ವಡೋದರದಲ್ಲಿ ಅರ್ಧಶತಕ ಸಿಡಿಸಿದ ಸ್ಮೃತಿ ಮಂಧಾನಾ ಅವರು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ವರ್ಷವೊಂದರಲ್ಲಿ ಏಳನೇ ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಮೂರು ಏಕೈಕ ವರ್ಷಗಳಲ್ಲಿ ಏಳು ಬಾರಿ 50ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ವಿಶ್ವದ ಮೊದಲ ಆಟಗಾರ್ತಿ ಎಂಬ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಈ ಹಿಂದೆ 2018 ಮತ್ತು 2022ರಲ್ಲಿಯೂ ಅವರು ಈ ಸಾಧನೆ ಮಾಡಿದ್ದರು. ಇದೀಗ ಪ್ರಸಕ್ತ ವರ್ಷದಲ್ಲಿಯೂ 7 ಅರ್ಧಶತಕಗಳನ್ನು ಅವರು ಸಿಡಿಸಿದ್ದಾರೆ. ಆಸ್ಟ್ರೇಲಿಯಾ ದಂತಕತೆ ಬೆಲಿಂಡಾ ಕ್ಲಾರ್ಕ್ ಅವರು 1997 ಮತ್ತು 2000ರಲ್ಲಿ ಎರಡು ಬಾರಿ ಈ ಸಾಧನೆ ಮಾಡಿದ್ದರು.
16 ಅರ್ಧಶತಕ ಸಿಡಿಸಿದ ಮಂಧಾನಾ
ಏಕೈಕ ಕ್ಯಾಲೆಂಡರ್ ವರ್ಷದಲ್ಲಿ 16 ಬಾರಿ 50ಕ್ಕೂ ಅಧಿಕ ರನ್ ಗಳಿಸಿದ ಮೊದಲ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಂಬ ದಾಖಲೆಯನ್ನು ಕೂಡ ಸ್ಮೃತಿ ಮಂಧಾನಾ ಅವರನ್ನು ಬರೆದಿದ್ದಾರೆ. 2024ರಲ್ಲಿ ಅವರು ನಾಲ್ಕು ಒಡಿಐ ಶತಕಗಳು ಹಾಗೂ ಮೂರು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇನ್ನು ಟಿ20ಐ ಕ್ರಿಕೆಟ್‌ನಲ್ಲಿ ಎಂಟು ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ವರ್ಷ ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅವರು ಎರಡು ಶತಕಗಳನ್ನು ಬಾರಿಸಿದ್ದರು.
ಈ ಸುದ್ದಿಯನ್ನು ಓದಿ: INDW vs WIW: ಎರಡನೇ ಪಂದ್ಯ ಗೆದ್ದು ಮಹಿಳಾ ಏಕದಿನ ಸರಣಿ ವಶಪಡಿಸಿಕೊಂಡ ಭಾರತ!