ಬೌಲಿಂಗ್ ಬಿಟ್ಟು ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ ಬುಮ್ರಾ; ಸಿಕ್ಸರ್ ಸುರಿಮಳೆಗೈದ ವಿಡಿಯೊ ಇಲ್ಲಿದೆ
Jasprit Bumrah: ರೋಹಿತ್ ಶರ್ಮ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೊಂದಿದ ಕಾರಣ ಅವರಿಂದ ತೆರವಾದ ನಾಯಕತ್ವ ಸ್ಥಾನದ ರೇಸ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಮುಂಚೂಣಿಯಲ್ಲಿದ್ದಾರೆ. ಅನೇಕ ಮಾಜಿ ಆಟಗಾರರು ಕೂಡ ಬುಮ್ರಾಗೆ ನಾಯಕತ್ವ ನೀಡಿದರೆ ಉತ್ತಮ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಮುಂಬಯಿ: ಟೀಮ್ ಇಂಡಿಯಾದ ಪ್ರಧಾನ ವೇಗಿ, ಯಾರ್ಕರ್ ಸ್ಪೆಷಲಿಸ್ಟ್ ಜಸ್‌ಪ್ರೀತ್ ಬುಮ್ರಾ(Jasprit Bumrah) ಅವರು ಬೌಲಿಂಗ್ ಬಿಟ್ಟು ಇದೀಗ ಬ್ಯಾಟಿಂಗ್ ಕಡೆಗೆ ಹೆಚ್ಚು ಗಮನ ಕೇಂದ್ರೀಕರಿಸಿದಂತಿದೆ. ಹೌದು, ಮುಂಬೈ ಇಂಡಿಯನ್ಸ್(Mumbai Indians) ನೆಟ್ಸ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಬ್ಯಾಟಿಂಗ್(Bumrah batting in MI nets) ನಡೆಸಿದ ವಿಡಿಯೊವೊಂದು ವೈರಲ್ ಆಗಿದ್ದು ಈ ವಿಡಿಯೊದಲ್ಲಿ ಬುಮ್ರಾ ಸತತ ಸಿಕ್ಸರ್ ಹೊಡೆತಗಳನ್ನು ಬಾರಿಸುತ್ತಿರುವುದನ್ನು ಕಾಣಬಹುದಾಗಿದೆ. ಬುಮ್ರಾ ಅವರ ಈ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿ ಕಂಡು ಅವರ ಅಭಿಮಾನಿಗಳು ದಂಗಾಗಿದ್ದಾರೆ.
ಬುಮ್ರಾ ಬ್ಯಾಟಿಂಗ್ ಅಭ್ಯಾಸದ ವಿಡಿಯೊವನ್ನು ಮುಂಬೈ ಇಂಡಿಯನ್ಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡು ' ಬ್ಯಾಟ್ ಜತೆಗೆ ಬೂಮ್-ಬೂಮ್ ಬೂಮ್ರಾ ಎಂದು ಬೆರೆದುಕೊಂಡಿದೆ. ಈ ವಿಡಿಯೊ ಕಂಡ ಕೆಲ ನೆಟ್ಟಿಗರು ಬುಮ್ರಾ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿ ಎಂದು ಸಲಹೆ ನೀಡಿದ್ದಾರೆ. ಬುಮ್ರಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಂದು ಅರ್ಧಶತಕ ಕೂಡ ಬಾರಿಸಿದ್ದಾರೆ.
ರೋಹಿತ್ ಶರ್ಮ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೊಂದಿದ ಕಾರಣ ಅವರಿಂದ ತೆರವಾದ ನಾಯಕತ್ವ ಸ್ಥಾನದ ರೇಸ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಮುಂಚೂಣಿಯಲ್ಲಿದ್ದಾರೆ. ಅನೇಕ ಮಾಜಿ ಆಟಗಾರರು ಕೂಡ ಬುಮ್ರಾಗೆ ನಾಯಕತ್ವ ನೀಡಿದರೆ ಉತ್ತಮ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದ್ಯ ಮುಂಬೈ ಆಡಿದ 12 ಪಂದ್ಯಗಳಲ್ಲಿ 7 ಗೆಲುವು 5 ಸೋಲಿನೊಂದಿಗೆ 14 ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದೆ. ಪ್ಲೇ ಆಫ್ ಪ್ರವೇಶಿಸಬೇಕಿದ್ದರೆ ಮುಂಬೈ ಉಳಿದಿರುವ ಎರಡಕ್ಕೆ ಎರಡೂ ಪಂದ್ಯ ಗೆಲ್ಲಬೇಕು. ಒಂದರಲ್ಲಿ ಸೋತರೆ ಆಗ ತಂಡದ ಭವಿಷ್ಯ ಬೇರೆ ಫಲಿತಾಂಶಗಳ ಮೇಲೆ ಅವಲಂಬಿತಗೊಳ್ಳಲಿದೆ. ಒಂದು ವೇಳೆ ಎರಡರಲ್ಲೂ ಸೋತರೆ ತಂಡ ಹೊರಬೀಳಲಿದೆ.