ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Railway Exams: ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಇಲಾಖೆ ನೇಮಕಾತಿಗೆ ಕನ್ನಡದಲ್ಲೂ ಪರೀಕ್ಷೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 15 ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಪ್ರಶ್ನೆಗಳನ್ನು ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ನೀಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆ ನೇಮಕಾತಿಗೆ ಕನ್ನಡದಲ್ಲೂ ಪರೀಕ್ಷೆ

ಹರೀಶ್‌ ಕೇರ ಹರೀಶ್‌ ಕೇರ Aug 21, 2025 7:31 AM

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಕನ್ನಡ ಸಹಿತ 15 ಭಾಷೆಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು (Railway Exams) ನಡೆಸಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav)‌ ಬುಧವಾರ ಲೋಕಸಭೆಗೆ ತಿಳಿಸಿದರು. ವೈಷ್ಣವ್ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದೆ ಮಾಹಿತಿ ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಶ್ನೆಗೆ ಉತ್ತರಿಸಿದ ವೈಷ್ಣವ್, ಅರ್ಜಿ ಸಲ್ಲಿಸುವ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿದರು. ಯಾವುದೇ ರಾಜ್ಯ ಅಥವಾ ಪ್ರದೇಶದ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದಿಲ್ಲ ಎಂದರು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 15 ಭಾಷೆಗಳ ಪೈಕಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬೇಕು. ಪ್ರಶ್ನೆಗಳನ್ನು ಅಭ್ಯರ್ಥಿ ಆಯ್ಕೆ ಮಾಡಿದ ಭಾಷೆಯಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru: ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ರೈಲ್ವೆ ಸಿಬ್ಬಂದಿ