ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka High Court: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸುಳ್ಳು ಕೇಸ್ ಇದೆ ಎಂಬ ಕಾರಣಕ್ಕೆ ವಾಪಸ್ ಪಡೆಯಲಾಗಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದೀಗ ಹೈಕೋರ್ಟ್‌ (Karnataka high court) ಸರಕಾರದ ಆದೇಶವನ್ನು ರದ್ದುಪಡಿಸಿದೆ.

43 ಕ್ರಿಮಿನಲ್‌ ಕೇಸ್ ವಾಪಸ್ ಆದೇಶ ರದ್ದುಪಡಿಸಿದ ಹೈಕೋರ್ಟ್‌

ಹರೀಶ್‌ ಕೇರ ಹರೀಶ್‌ ಕೇರ May 29, 2025 5:51 PM

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು (Criminal cases) ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ (Karnataka Government) ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ. ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು 2024ರ ಅಕ್ಟೋಬರ್ 10ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ ಅಂಜಾರಿಯಾ, ನ್ಯಾ.ಕೆ.ವಿ ಅರವಿಂದ್ ಅವರಿದ್ದ ಹೈಕೋರ್ಟ್​ ದ್ವಿಸದಸ್ಯ ಪೀಠ ಇಂದು (ಮೇ 29) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದ ಆದೇಶವನ್ನು ಕೋರ್ಟ್​ ರದ್ದು ಮಾಡಿರುವುದು ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.

ಪಿಐಎಲ್‌ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್‌, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅಲ್ಲದೇ ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್‌ 321ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಸಿದ್ದರಾಮಯ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆಯಲು ತೀರ್ಮಾನಿಸಿದ ಬೆನ್ನಲ್ಲೇ ವಿರೋಧ ಪಕ್ಷವಾದ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಸರ್ಕಾರದ ನಡೆ ಬಗ್ಗೆ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದರು.

ಇದರ ಬೆನ್ನಲ್ಲೇ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ. ಎಲ್ಲರ ಕಾಲದಲ್ಲೂ ಪ್ರಕರಣ ವಾಪಸ್ ಪಡೆದ ಉದಾಹರಣೆಗಳಿವೆ. ಸುಳ್ಳು ಕೇಸ್ ಇದೆ ಎಂಬ ಕಾರಣಕ್ಕೆ ವಾಪಸ್ ಪಡೆಯಲಾಗಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದು ಎಂದಿದ್ದರು.

ಏನಿದು ಹುಬ್ಬಳ್ಳಿ ಗಲಭೆ ಪ್ರಕರಣ?

ಏಪ್ರಿಲ್ 16, 2022 ರಂದು ಯುವಕನೊಬ್ಬ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು ಉದ್ರಿಕ್ತರು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರು ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಸಂಬಂಧ 11 ಎಫ್‌ಐಆರ್‌ ದಾಖಲಾಗಿ 155 ಮಂದಿ ಮೇಲೆ ಕೇಸ್‌ ದಾಖಲಾಗಿತ್ತು. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್‌ ವಾಹನಗಳಿಗೆ ಹಾನಿಯಾಗಿದ್ದರೆ ಇಬ್ಬರು ಪೊಲೀಸ್‌ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಳ್ಳಲಾಗಿತ್ತು. ವಿಪಕ್ಷ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಆದರೂ ಸರ್ಕಾರ ಕೇಸ್ ವಾಪಸ್ ಪಡೆದುಕೊಂಡು ಆದೇಶ ಹೊರಡಿಸಿತ್ತು.

ಇದನ್ನೂ ಓದಿ: Murder Case: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಕೇಸ್‌ ಆರೋಪಿ ಹತ್ಯೆ; ಮೂವರು‌ ಎಸ್‌ಡಿಪಿಐ ಕಾರ್ಯಕರ್ತರ ಬಂಧನ