ಬಾಕ್ಸರ್ ಮಾನ್ಸಿ ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
ಮಾನ್ಸಿ ಸುವರ್ಣ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹೆಚ್ಚು ಪದಕಗಳನ್ನು ಜಯಿಸಲಿ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ. ಆಕೆಯ ಸಾಧನೆಗೆ ನಮ್ಮ ಸರ್ಕಾರ ಸದಾ ಬೆನ್ನೆಲುಬು ಆಗಿ ನಿಲ್ಲಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಡುಪಿ: ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಉಡುಪಿ ಜಿಲ್ಲೆಯ ಮಾನ್ಸಿ ಜೆ. ಸುವರ್ಣ(Mansi J. Suvarna) ಅವರ ಸಾಧನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್(lakshmi hebbalkar) ಅವರು ಶ್ಲಾಘಿಸಿದ್ದಾರೆ.
'ಮೀನುಗಾರಿಕೆಯಲ್ಲಿ ತೊಡಗಿರುವ ಮಲ್ಪೆಯ ಮಾಲತಿ ಹಾಗೂ ಜಗದೀಶ್ ಸುವರ್ಣ ದಂಪತಿ ಪುತ್ರಿ ಮಾನ್ಸಿ ಗೆದ್ದಿರುವ ಕಂಚಿನ ಪದಕ ರಾಜ್ಯದ ಇತರ ಬಾಕ್ಸರ್‌ಗಳಿಗೆ ಸ್ಫೂರ್ತಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಬಾಕ್ಸಿಂಗ್ ಕ್ರೀಡೆ ವಿರಳ. ಈ ಕ್ರೀಡೆ ಮತ್ತಷ್ಟು ಬೆಳೆಯಲಿ. ಕರಾವಳಿಯ ಮಕ್ಕಳು ಬಾಕ್ಸಿಂಗ್‌ನಲ್ಲಿ ಮಿಂಚಲಿ' ಎಂದು ಸಚಿವರು ಹಾರೈಸಿದ್ದಾರೆ.
ಮಾನ್ಸಿ ಸುವರ್ಣ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹೆಚ್ಚು ಪದಕಗಳನ್ನು ಜಯಿಸಲಿ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ. ಆಕೆಯ ಸಾಧನೆಗೆ ನಮ್ಮ ಸರ್ಕಾರ ಸದಾ ಬೆನ್ನೆಲುಬು ಆಗಿ ನಿಲ್ಲಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ Gill jersey: ಹರಾಜಿನಲ್ಲಿ 5.41 ಲಕ್ಷ ರೂ. ಗಳಿಸಿದ ಗಿಲ್ ಜೆರ್ಸಿ
ವಿದ್ಯಾರ್ಥಿನಿಯ ಐಪಿಎಸ್ ಕನಸಿಗೆ ಲಕ್ಷ್ಮೀ ಹೆಬ್ಬಾಳಕರ್ ನೆರವು
ಬೆಳಗಾವಿ: ಗೃಹಲಕ್ಷ್ಮೀ ಹಣದ ಸಹಾಯದಿಂದ ಓದಿ ದ್ವಿತೀಯ ಪಿಯುಸಿ (2nd PUC Result 2025) ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿದ್ದ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ನೆರವಾಗಿದ್ದರು.
ಇತಿಹಾಸ ವಿಭಾಗದಲ್ಲಿ 100ಕ್ಕೆ 100 ಅಂಕ ಪಡೆದಿರುವ ವಿದ್ಯಾರ್ಥಿನಿ ಪೃಥ್ವಿ ಹೋಳಿ ಅವರ ಓದಿಗೆ ತಮ್ಮ ತಾಯಿ ಅವರಿಗೆ ಬರುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಹಣ ನೆರವಾಯಿತು. ಭವಿಷ್ಯದಲ್ಲಿ ಐಪಿಎಸ್ ಅಧಿಕಾರಿಯಾಗಬೇಕು ಎಂದು ಕನಸು ಕಂಡಿರುವೆ ಎಂದು ಹೇಳಿಕೊಂಡಿದ್ದರು. ವಿದ್ಯಾರ್ಥಿನಿಯ ಕನಸನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದ ಸಚಿವರು, ವಿದ್ಯಾರ್ಥಿನಿ ಪೃಥ್ವಿ ಹೋಳಿ ಅವರ ಕನಸಿಗೆ ಬೆನ್ನೆಲುಬಾಗಿ ನಿಂತಿದ್ದಾರೆ.