ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BBMP: ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ್‌ ರಾವ್‌, ಆಡಳಿತಗಾರರಾಗಿ ತುಷಾರ್‌ ಗಿರಿನಾಥ್‌ ಅಧಿಕಾರ ಸ್ವೀಕಾರ

ಬಿಬಿಎಂಪಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ, ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿನಾಥ್ ಅವರು ಕೂಡ ಅಧಿಕಾರ ಸ್ವೀಕರಿಸಿದರು. ಇತ್ತೀಚೆಗೆ ಸರಕಾರ ಈ ಕುರಿತು ಸೂಚನೆ ಹೊರಡಿಸಿತ್ತು.

ಬಿಬಿಎಂಪಿಯಲ್ಲಿ ಮಹೇಶ್ವರ ರಾವ್‌, ತುಷಾರ್‌ ಗಿರಿನಾಥ್‌ ಅಧಿಕಾರ ಸ್ವೀಕಾರ

ಹರೀಶ್‌ ಕೇರ ಹರೀಶ್‌ ಕೇರ Apr 30, 2025 9:36 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ‌(BBMP) ನೂತನ ಆಡಳಿತಗಾರರಾಗಿ ತುಷಾರ್ ಗಿರಿನಾಥ್ (Tushar Girinath) ಅವರು ಹಾಗೂ ಮುಖ್ಯ ಆಯುಕ್ತರಾಗಿ (Commissioner) ಮಹೇಶ್ವರ್ ರಾವ್ (Maheshwara Rao) ಅವರು ಸರ್ಕಾರದಿಂದ ನೇಮಕಗೊಂಡಿದ್ದು, ಇಂದು ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರದಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿದ್ದಂತ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಅವರ ಸ್ಥಾನಕ್ಕೆ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಬಿಬಿಎಂಪಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ, ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಅವರು ಅಧಿಕಾರ ಸ್ವೀಕರಿಸಿದರು. ಅಲ್ಲದೇ ಬಿಬಿಎಂಪಿಯ ನೂತನ ಆಡಳಿತಗಾರರಾಗಿ ತುಷಾರ್ ಗಿರಿನಾಥ್ ಅವರು ಕೂಡ ಅಧಿಕಾರ ಸ್ವೀಕರಿಸಿದರು. ಈ ವೇಳೆ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರಾದ ಕರೀಗೌಡ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದೇಶಕ್ಕೆ ಮಾದರಿಯಾಗಿ ಗ್ರೇಟರ್‌ ಬೆಂಗಳೂರು: ಡಿಕೆ ಶಿವಕುಮಾರ್

ಮೈಸೂರು: ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿರುಗೇಟು ನೀಡಿದರು. ಮೈಸೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್‌ಗೆ ದೇವೇಗೌಡರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, ʼದೇವೇಗೌಡರು ದೊಡ್ಡವರು. ಪಾಪ ಅವರು ಮರೆತಿರಬೇಕು. ಬಿಡದಿ, ಸಾತನೂರು, ನಂದಗುಡಿ ಈ ಭಾಗದಲ್ಲಿ ಟೌನ್ ಶಿಪ್‌ಗೆ ನೋಟಿಫಿಕೇಶನ್ ಹೊರಡಿಸಿದ್ದು ಅವರ ಸುಪುತ್ರ ಕುಮಾರಸ್ವಾಮಿ. ಅವರೇ ಈ ತೀರ್ಮಾನ ಮಾಡಿ ಡಿಎಲ್‌ಎಫ್ ಅವರಿಂದ 300 ಕೋಟಿ ರೂ. ಹಣ ಕಟ್ಟಿಸಿಕೊಂಡಿದ್ದರು. ಆನಂತರ ಬಿಜೆಪಿ ಸರ್ಕಾರ ಬಂದಾಗ ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಹಣ ವಾಪಸ್ ನೀಡಿದ್ದರುʼ ಎಂದು ನೆನಪಿಸಿದರು.

ನಾನು ಈಗ ಯಾವುದೇ ಜಮೀನು ಡಿನೋಟಿಫಿಕೇಷನ್ ಮಾಡಲು ತಯಾರಿಲ್ಲ. ಇದು ಮಾಡಿದ ತಕ್ಷಣ ದುಡ್ಡು-ಕಾಸು ಹೊಡೆದರು ಎನ್ನುವ ಆರೋಪ ಬರುತ್ತದೆ. ಈಗಾಗಲೇ ನಾನು ಕೋರ್ಟ್, ಕಚೇರಿ ಅಲೆದು, ಜೈಲು ವಾಸವನ್ನೂ ಅನುಭವಿಸಿದ್ದೇನೆ. ನನ್ನ ಸ್ವಂತ ಜಮೀನಿನ ಬಗ್ಗೆಯೂ ಇವರುಗಳೇ ಆರೋಪ ಮಾಡಿದ್ದಾರೆ. ದೇವೇಗೌಡರೇ ನಿಮ್ಮ ಮಗ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರೇ ಯಾಕೆ ಈ ಜಮೀನು ಡಿನೋಟಿಫಿಕೇಷನ್ ಮಾಡಲಿಲ್ಲ. ಈಗೇಕೆ ಮಾತನಾಡುತ್ತಿದ್ದೀರಿ? ನಾನು ಎಲ್ಲಾ ರೈತರ ಬಳಿ ಮಾತನಾಡಿದ್ದೇನೆ. ಗ್ರೇಟರ್ ಬೆಂಗಳೂರು ನಗರ ಇಡೀ ದೇಶಕ್ಕೇ ಮಾದರಿಯಾಗುವಂತಹ ನಗರವನ್ನಾಗಿ ಮಾಡುತ್ತೇವೆ. ದೆಹಲಿ‌, ಚಂಡೀಗಡ್ ಮಾದರಿಗಿಂತ ಉತ್ತಮವಾಗಿ 10 ಸಾವಿರ ಎಕರೆಯಲ್ಲಿ ಬೆಂಗಳೂರು ನಗರಕ್ಕಿಂತ ಚೆನ್ನಾಗಿ ರೂಪಿಸಲಾಗುವುದು. ಇದಕ್ಕಾಗಿ ಯೋಜನೆ ಸಿದ್ಧವಾಗುತ್ತಿದೆ ಎಂದರು.‌

ಇದನ್ನೂ ಓದಿ: Tushar Girinath: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ವರ್ಗಾವಣೆ; ಹೊಸ ಆಯುಕ್ತ ನೇಮಕ