Murder Case: ಕ್ಷುಲ್ಲಕ ಕಾರಣಕ್ಕೆ ಸುತ್ತಿಗೆಯಿಂದ ಹೊಡೆದು ಹೆಂಡತಿಯ ಕೊಲೆ
ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ಗುರುತಿಸಲಾಗಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru Crime news) ಮತ್ತೊಂದು ಕೊಲೆಯಾಗಿದ್ದು ಗಂಡನೊಬ್ಬ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನು ಕೊಲೆ (husband killed wife) ಮಾಡಿದ್ದಾನೆ. ದಂಪತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ಯುದ್ಧ ಆರಂಭವಾಗಿದ್ದು, ಅದು ಗಲಾಟೆಗೆ ತಿರುಗಿದೆ. ಆಗ ಗಂಡ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ (Murder case) ಮಾಡಿರುವ ಘಟನೆ ಬೆಂಗಳೂರಿನ ಹೆಮ್ಮಿಗೆಪುರದ ಗಾಣಪ್ಪ ಲೇಔಟ್‌ನಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಭಾಗ್ಯ ಎಂದು ಗುರುತಿಸಲಾಗಿದ್ದು, ಪತಿ ಶ್ರೀ ರಾಮ ಕೊಲೆ ಆರೋಪಿಯಾಗಿದ್ದಾನೆ. ಭಾಗ್ಯ ಹಾಗು ಶ್ರೀ ರಾಮನ ನಡುವೆ ಯಾವಾಗಲೂ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಕೊಲೆ ಕುರಿತಂತೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ
ರಾಮನಗರ : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. KA 03 NA 4031 ಸಂಖ್ಯೆಯ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಕ್ಕುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: Santhara Ritual : ಸಂತಾರ ಪಾಲಿಸಿದ 3 ವರ್ಷದ ಬಾಲಕಿ ಸಾವು; ಏನಿದು ಘಟನೆ?