Murder Case: ಬೆಂಗಳೂರಿನಲ್ಲೊಂದು ಪೈಶಾಚಿಕ ಕೃತ್ಯ, ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನ ಅಪಹರಿಸಿ ಬರ್ಬರ ಕೊಲೆ
ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ ಈ ಹೇಯ ಕೃತ್ಯ ನಡೆದಿದೆ. ಬಾಲಕ ರಮಾನಂದನ ಕುಟುಂಬ ಮತ್ತು ಮತ್ತೂರು ಕುಟುಂಬದ ನಡುವೆ ಗಲಾಟೆ ಆಗಿತ್ತು. ಗಲಾಟೆ ಹಿನ್ನೆಲೆಯಲ್ಲಿ ಬಾಲಕ ರಮಾನಂದನನ್ನು ಅಪಹರಿಸಿ (Murder Case) ಕೊಲೆಗಯ್ಯಲಾಗಿದೆ. ಕೊಲೆಯ ಬಳಿಕ ಆರೋಪಿ ಮತ್ತೂರು ಬಾಲಕನ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕೆರೆಯಲ್ಲಿ ಬಿಸಾಕಿದ್ದಾನೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ (Bengaluru crime news) ಸಣ್ಣಪುಟ್ಟ ಜಗಳ, ಅದರಿಂದ ಹುಟ್ಟಿಕೊಂಡ ದ್ವೇಷ (vengeance) ತೀರಿಸಲು ಬರ್ಬರವಾಗಿ ಕೊಲೆ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದೀಗ ಪಕ್ಕದ ಮನೆಯವರ (neighbor) ಮೇಲಿನ ದ್ವೇಷಕ್ಕೆ ಆ ಮನೆಯ ಬಾಲಕನನ್ನೇ ಅಪಹರಿಸಿ (kidnapped), ಕೊಲೆಗೈದಿರುವ (Boy Murder case) ಪೈಶಾಚಿಕ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ರಮಾನಂದ (8) ಎಂಬ ಬಾಲಕನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ ಈ ಹೇಯ ಕೃತ್ಯ ನಡೆದಿದೆ. ಬಾಲಕ ರಮಾನಂದನ ಕುಟುಂಬ ಮತ್ತು ಮತ್ತೂರು ಕುಟುಂಬದ ನಡುವೆ ಗಲಾಟೆ ಆಗಿತ್ತು. ಗಲಾಟೆ ಹಿನ್ನೆಲೆಯಲ್ಲಿ ಬಾಲಕ ರಮಾನಂದನನ್ನು ಅಪಹರಿಸಿ ಕೊಲೆಗಯ್ಯಲಾಗಿದೆ. ಕೊಲೆಯ ಬಳಿಕ ಆರೋಪಿ ಮತ್ತೂರು ಬಾಲಕನ ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕೆರೆಯಲ್ಲಿ ಬಿಸಾಕಿದ್ದಾನೆ. ನಿನ್ನೆ ರಾಯಸಂದ್ರ ಕೆರೆಯ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ. ಆರೋಪಿ ಮತ್ತೂರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆಯಲ್ಲಿ ರೌಡಿಶೀಟರ್ ಕೊಲೆ
ದಾವಣಗೆರೆ: ಕುಖ್ಯಾತ ರೌಡಿಶೀಟರ್ (Rowdy sheeter) ಸಂತೋಷ್ ಕುಮಾರ್ ಎಂಬಾತನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ (hacked to death) ಬರ್ಬರವಾಗಿ ಹತ್ಯೆ (murder case) ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಬೀಳಿಸಿ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ ದಾವಣಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿದ್ದು ಹತ್ಯೆಯ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಯಾದ ರೀತಿ ನೋಡಿದರೆ ವೈಯಕ್ತಿಕ ದ್ವೇಷ ಹಾಗೂ ಗ್ಯಾಂಗ್ ಇರುವ ಸಾಧ್ಯತೆ ಇದೆ. ಸುತ್ತಮುತ್ತಿನ ಸಿಸಿ ಟಿವಿ ಫೂಟೇಜ್‌ಗಳನ್ನು ಪರಿಶೀಲಿಸಲಾಗುತ್ತಿದೆ.
ಇದನ್ನೂ ಓದಿ: Murder Case: ತಂದೆಯ ಕೊಲೆಗೆ 16 ವರ್ಷ ಬಳಿಕ ಸೇಡು ತೀರಿಸಿಕೊಂಡ ಮಗ; ಮಾವನ ಕಗ್ಗೊಲೆ