CM Siddaramaiah: ಪಕ್ಷದಲ್ಲಿ ಆಂತರಿಕ ಜಗಳವಿಲ್ಲ, ರಾಜಣ್ಣ ಹೇಳಿಕೆ ನಿರ್ಲಕ್ಷಿಸಿ: ಸಿಎಂ ಸಿದ್ದರಾಮಯ್ಯ
ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು. ನಾಡಪ್ರಭು ಕೆಂಪೇಗೌಡ 516ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.


ಬೆಂಗಳೂರು: ಪಕ್ಷದಲ್ಲಿ (congress) ಯಾವುದೇ ಆಂತರಿಕ ಜಗಳವಿಲ್ಲ, ಸಚಿವ ಕೆ.ಎನ್ ರಾಜಣ್ಣ (Minister KN Rajanna) ಅವರ ಹೇಳಿಕೆಯನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು ಎಂದರು.
ಕೆಂಪೇಗೌಡ ದೂರದೃಷ್ಟಿಯ ಆಡಳಿತಗಾರ
ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಸಿಎಂ ಹೇಳಿದರು. ನಾಡಪ್ರಭು ಕೆಂಪೇಗೌಡ 516ನೇ ಜಯಂತಿಯ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.
ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: CM Siddaramaiah: ಏಳು ಮಸೂದೆಗಳಿಗೆ ಅನುಮೋದನೆ ನೀಡಿ: ರಾಷ್ಟ್ರಪತಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ