Tumkur News: ಎನ್.ಎಸ್.ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ; ನಾಗರಾಜು.ಎನ್
ವಿದ್ಯಾರ್ಥಿಗಳು ತಮ್ಮ ಗ್ರಾಮಗಳಲ್ಲಿ ಸಾರ್ವಜನಿಕ ರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾದ ಪರಿಸರ ಕಾಪಾಡಬೇಕು ಪಠ್ಯದ ಜೊತೆಗೆ ಸಮುದಾಯದ ಪರಿಚಯ, ಸೇವೆ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಾಂಸ್ಕೃತಿಕ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಹ ಭೋಜನ, ಕ್ರೀಡೆ ಮೂಲಕ ಸಮಗ್ರತೆ ಪರಿಕಲ್ಪನೆ ಹೀಗೆ ಹಲವು ಚಿಂತನೆ ಸಾಕಾರಕ್ಕಾಗಿ ಶಿಬಿರ ನಡೆಯು ತ್ತದೆ.

ಶಿರಾ ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ಶಿರಾ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ೨೦೨೪-೨೫ ನೇ ಸಾಲಿನ ರಾಷ್ಟಿçÃಯ ಸೇವಾ ಯೋಜನೆ ಶಿಬಿರದ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಶಿಬಿರಾಧಿಕಾರಿ ನಾಗರಾಜು.ಎನ್ ಉದ್ಘಾಟಿಸಿದರು.

ಶಿರಾ: ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶಿಸ್ತು, ಸೇವಾ ಮನೋ ಭಾವ, ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಎನ್‌ಎಸ್‌ಎಸ್ ಶಿಬಿರ ಅಧಿಕಾರಿ ನಾಗರಾಜು.ಎನ್ ಹೇಳಿದರು. ಅವರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ಶಿರಾ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿ ಯಿಂದ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದಕ್ಕೆ, ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ ಎನ್‌ಎಸ್‌ಎಸ್ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಅನುಭವ ಪಡೆದುಕೊಳ್ಳಬೇಕು ಎಂದರು.
ಕನ್ನಡ ಉಪನ್ಯಾಸಕ ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಗ್ರಾಮಗಳಲ್ಲಿ ಸಾರ್ವಜನಿಕ ರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛವಾದ ಪರಿಸರ ಕಾಪಾಡಬೇಕು ಪಠ್ಯದ ಜೊತೆಗೆ ಸಮುದಾಯದ ಪರಿಚಯ, ಸೇವೆ ಮೂಲಕ ಸ್ವಚ್ಛತೆ ಅರಿವು, ನಮ್ಮಲ್ಲಿನ ಸಾಂಸ್ಕೃತಿಕ ಪ್ರದರ್ಶನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸಹ ಭೋಜನ, ಕ್ರೀಡೆ ಮೂಲಕ ಸಮಗ್ರತೆ ಪರಿಕಲ್ಪನೆ ಹೀಗೆ ಹಲವು ಚಿಂತನೆ ಸಾಕಾರಕ್ಕಾಗಿ ಶಿಬಿರ ನಡೆಯುತ್ತದೆ. ಅದನ್ನು ಅರ್ಥ ಮಾಡಿಕೊಂಡು ಎಲ್ಲ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.
ಇದನ್ನೂ ಓದಿ: Tumkur News: ಕಾರ್ಖಾನೆ ಸಂಪ್ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ಸಾವು, ಮತ್ತಿಬ್ಬರು ಅಸ್ವಸ್ಥ
ಇತಿಹಾಸ ಮುಖ್ಯಸ್ಥರಾದ ಸುಮಲತಾ ಅವರು ಮಾತನಾಡಿ ಕಲಿಕೆ ವಿದ್ಯಾರ್ಥಿ, ಶಿಕ್ಷಕರ ನಡುವಿನ ಕೊಂಡಿ ಆಗಿರದೆ ಸಮುದಾಯದ ನಡುವೆಯೂ ರಚನಾತ್ಮಕ ಸಂಬಂಧ ಏರ್ಪಡಬೇಕು ಎನ್ನುವ ಆಶಯದೊಂದಿಗೆ ಎನ್‌ಎಸ್‌ಎಸ್ ಶಿಬಿರ ನಡೆಸಲಾಗುತ್ತದೆ. ಗ್ರಾಮದ ಸ್ವಚ್ಛತೆ ಕೆಲಸದ ಜತೆ ಗ್ರಾಮೀಣರಲ್ಲಿ ಆರೋಗ್ಯ ಅರಿವು, ಮೌಢ್ಯತೆ ಹೋಗಲಾಡಿಸುವುದು, ಕಂದಾಚಾರಕ್ಕೆ ವಿರುದ್ಧವಾಗಿ ಯುವಕರ ಪ್ರೇರಣೆ ಹೀಗೆ ಹಲವು ಮಾರ್ಗದಲ್ಲಿ ಯುವ ಜನತೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ.ಗೀತಾ, ಡಾ.ಕಾವೇರಿ, ಡಾ.ಮಧು, ಡಾ.ಶಂಕರ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಪಂಜಿಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಮತ್ತು ಸೋರೆಕುಂಟೆ ಗ್ರಾಮಸ್ಥರು ಹಾಜರಿದ್ದರು. ಕಾರ್ಯ ಕ್ರಮದಲ್ಲಿ ಎಲ್ಲರಿಗೂ ಬಿಪಿ ಶುಗರ್ ಮತ್ತು ಎಚ್‌ಐವಿ ಮತ್ತು ಸ್ವಚ್ಛತೆ ಬಗ್ಗೆ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.