ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam terror attack: ಪಹಲ್ಗಾಮ್‌ ಉಗ್ರರ ದಾಳಿ; ಸಹಾಯಕ್ಕಾಗಿ ಈ ನಂಬರ್‌ಗೆ ಕರೆ ಮಾಡಿ

ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಕಾಶ್ಮೀರದ ಪಹಲ್ಗಾಮ್‌ನ(Pahalgam terror attack) ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.

ಸಹಾಯವಾಣಿ ಬಿಡುಗಡೆ  ಮಾಡಿದ ಕೇಂದ್ರ  ಸರ್ಕಾರ

Profile Rakshita Karkera Apr 22, 2025 10:08 PM

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವಿದೇಶಿ ಪ್ರವಾಸಿಗರು, ಕನ್ನಡಿಗರು ಸೇರಿ ಒಟ್ಟು 27ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು(Helpline Release) ಬಿಡುಗಡೆ ಮಾಡಲಾಗಿದೆ. ತುರ್ತು ನಿಯಂತ್ರಣ ಕೊಠಡಿ - ಶ್ರೀನಗರ: 0194-2457543, 0194-2483651 ಆದಿಲ್ ಫರೀದ್, ಎಡಿಸಿ ಶ್ರೀನಗರ - 7006058623. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಸಹಾಯವಾಣಿ ಎಂದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗಾಯಾಳುಗಳನ್ನು ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿವೆ ಆದರೆ ಕಠಿಣ ಭೂಪ್ರದೇಶದಿಂದಾಗಿ ತೊಂದರೆಗಳನ್ನು ಎದುರಿಸುತ್ತಿವೆ. ಇನ್ನು ಲಷ್ಕರ್-ಎ-ತೈಬಾದ ಒಂದು ಶಾಖೆಯು ಘಟನೆಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ

ಈ ಸುದ್ದಿಯನ್ನೂ ಓದಿ: Pahalgam Terror Attack Live: ಮಹತ್ವದ ಸಭೆ ಬೆನ್ನಲ್ಲೇ ಅಮಿತ್‌ ಶಾ ಪಹಲ್ಗಾಮ್‌ಗೆ ಭೇಟಿ

ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಮನವಿ ಮಾಡಿದ್ದಾರೆ.