ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಆಪರೇಶನ್‌ ಸಿಂದೂರ್‌ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿ ಸೆರೆ

ಆಪರೇಷನ್ ಸಿಂದೂರ್ (Operation Sindoor) ಸಕ್ಸಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲಾಗಿತ್ತು. ಈ ವೇಳೆ ಪಿಜಿಯ ಬಾಲ್ಕನಿಯಲ್ಲಿ ಪಾಕಿಸ್ತಾನ ಪರ ಛತ್ತೀಸ್‌ಗಢ ಮೂಲದ ಶುಭಾಂಶು ಶುಕ್ಲಾ ಘೋಷಣೆ ಕೂಗಿದ್ದ. ಈತ ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಾನೆ.

ಆಪರೇಶನ್‌ ಸಿಂದೂರ್‌ ವೇಳೆ ಪಾಕ್‌ ಪರ ಘೋಷಣೆ ಕೂಗಿದ ವ್ಯಕ್ತಿ ಸೆರೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 14, 2025 7:53 AM

ಬೆಂಗಳೂರು: ಆಪರೇಷನ್ ಸಿಂದೂರ್ (Operation Sindoor) ಸಕ್ಸಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ (Pakistan slogan) ಕೂಗಿದ್ದ ಯುವಕನನ್ನು ಬಂಧಿಸಲಾಗಿದೆ. ಛತ್ತೀಸ್‌ಗಢ ಮೂಲದ ಶುಭಾಂಶು ಶುಕ್ಲಾ(26) ಬಂಧಿತ ಆರೋಪಿ. ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ಮೇ 9 ರಂದು ರಾತ್ರಿ 12:30ರಲ್ಲಿ ಘಟನೆ ನಡೆದಿತ್ತು. ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿದ್ದ ಶುಭಾಂಶು ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದು, ಪಿಜಿಯಲ್ಲಿ ನೆಲೆಸಿದ್ದ.

ಆಪರೇಷನ್ ಸಿಂದೂರ್ ಸಕ್ಸಸ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಲಾಗಿತ್ತು. ಈ ವೇಳೆ ಪಿಜಿಯ ಬಾಲ್ಕನಿಯಲ್ಲಿ ಪಾಕಿಸ್ತಾನ ಪರ ಶುಕ್ಲಾ ಘೋಷಣೆ ಕೂಗಿದ್ದ. ಹೊರಬಂದು ನೋಡಿದಾಗ ಇಬ್ಬರು ಪಿಜಿಯ ಬಾಲ್ಕನಿಯಲ್ಲಿ ನಿಂತಿದ್ದರು. ಈ ವೇಳೆ ಓರ್ವ ಯುವಕ ಪಾಕಿಸ್ತಾನದ ಪರ ಘೋಷಣೆ ಕೂಗುತ್ತಿದ್ದ. ಎದುರುಗಡೆ ಪಿಜಿಯಲ್ಲಿದ್ದ ಯುವಕ ಮೊಬೈಲ್ ನಲ್ಲಿ ವಿಡಿಯೋ ಸೆರೆ ಹಿಡಿದಿದ್ದ ನಂತರ 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಇಬ್ಬರು ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದರು. ಪರಿಶೀಲನೆಯ ವೇಳೆ ಶುಭಾಂಶು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟಿದೆ. ಹೀಗಾಗಿ ವೈಟ್‌ಫೀಲ್ಡ್ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Haveri News: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು