Online Betting: ಆನ್‌ಲೈನ್ ಬೆಟ್ಟಿಂಗ್‌ಗೆ ಬ್ಯಾಂಕ್ ಸಾಲ ಮಾಡಿ ಕಳೆದುಕೊಂಡ ಉದ್ಯೋಗಿ ಆತ್ಮಹತ್ಯೆ
Online Betting: ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಬೆಟ್ಟಿಂಗ್ ಆಡುತ್ತಿದ್ದ ಮನೋಜ್ ಕುಮಾರ್, ಲಕ್ಷಾಂತರ ಹಣ ಕಳೆದುಕೊಂಡಿದ್ದರು.

ಮೃತ ಮನೋಜ್ ಕುಮಾರ್

ಬೆಂಗಳೂರು : ಲಕ್ಷಗಟ್ಟಲೆ ಹಣ ಸಾಲ ಮಾಡಿಕೊಂಡು ಅದನ್ನು ಆನ್‌ಲೈನ್ ಬೆಟ್ಟಿಂಗ್‌ಗೆ (Online Betting) ಚೆಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನಲ್ಲಿ (bengaluru) ಖಾಸಗಿ ಬ್ಯಾಂಕ್ ಉದ್ಯೋಗಿ ಒಬ್ಬರು ತಾನು ಕೆಲಸ ಮಾಡುವ ಬ್ಯಾಂಕ್‌ನಲ್ಲೆ ಸಾಲ ಪಡೆದು ಸಾಲ (loan) ತೀರಿಸಲಾಗದೆ ಬೆಟ್ಟಿಂಗ್‌ನಲ್ಲಿ ಸೋತು ಮನನೊಂದು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಮೃತ ಮನೋಜ್ ಕುಮಾರ್ ಬೆಟ್ಟಿಂಗ್ ಆಡುತ್ತಿದ್ದರು. ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡಿದ್ದ ಮನೋಜ್ ಕುಮಾರ್ ಮನನೊಂದು ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ
ಬೆಂಗಳೂರು: ಬೆಂಗಳೂರಿನ (Bengaluru) ಪ್ರಮುಖ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ (Bomb Threat) ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್. ಆರ್ ನಗರ ಹಾಗೂ ಕೆಂಗೇರಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ (Private Schools) ಬಾಂಬ್ ಬೆದರಿಕೆಯೊಡ್ಡಲಾಗಿದೆ. ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ದೆಹಲಿಯ ಒಟ್ಟು 10 ಶಾಲೆಗಳಲ್ಲಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ಇದನ್ನೂ ಓದಿ: Child Death: ಜೋಕಾಲಿಯಲ್ಲಿ ಆಡುವಾಗ ಶಾಲು ಕುತ್ತಿಗೆಗೆ ಸುತ್ತಿಕೊಂಡು ಮಗು ಸಾವು