Physical Abuse: ಬೆಳಗಾವಿಯಲ್ಲಿ ಬಾಲಕಿಯನ್ನು ರೆಸಾರ್ಟ್‌ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ; ಇಬ್ಬರು ಬಾಲಕರು ಅರೆಸ್ಟ್
Physical Abuse: ಬೆಳಗಾವಿ ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಬಾಲಕಿ ಮೇಲೆ ಮೂವರು ಬಾಲಕರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪದಲ್ಲಿ ಮೇ 11 ರಂದು ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ರೆಸಾರ್ಟ್‌ಗೆ ಕರೆದೊಯ್ದು ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಮೂವರು ಬಾಲಕರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪದಲ್ಲಿ ಮೇ 11 ರಂದು ನಗರದ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಇಬ್ಬರು ಬಾಲಕರನ್ನು ಬಂಧಿಸಿದ್ದಾರೆ.
ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಸಾಕಿಬ್ ಎಂಬಾತನ ಹೆಸರಿನಲ್ಲಿ ರೂಮ್ ಬುಕ್ ಮಾಡಲಾಗಿತ್ತು. ನಂತರ ಮೂವರು ಬಾಲಕರು, ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆ ನಡೆದ ಕೆಲ ದಿನಗಳ ನಂತರ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ.
ಈ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಬಾಲಕರ ಪೈಕಿ ಓರ್ವ ಪೊಲೀಸ್ ಅಧಿಕಾರಿ ಪುತ್ರ ಎಂದು ಹೇಳಲಾಗುತ್ತಿದ್ದು, ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Bidadi Girl death case: ಬಿಡದಿ ಬಾಲಕಿ ಸಾವು ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದ ಎಫ್‌ಎಸ್ಎಲ್ ವರದಿ
![]()
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕುರಿತು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ. ನಗರದ ಹೊರವಲಯದಲ್ಲಿ ಇರುವ ರೆಸಾರ್ಟ್‌ಗಳ ವರದಿ ಪಡೆದು ಕಾನೂನು ರೀತಿಯ ನಡೆಸುತ್ತಿದ್ದಾರಾ ಎಂಬುದರ ಮಾಹಿತಿ ಪಡೆಯುತ್ತೇವೆ. ಜೊತೆಗೆ ಬಾಲಕರಿಗೆ ರೆಸಾರ್ಟ್ ಕೊಟ್ಟ ಮಾಲಿಕರನ್ನು ತನಿಖೆಗೆ ಒಳಪಡಿಸುತ್ತೇವೆ.
ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ನಗರ ಪೊಲೀಸ್ ಆಯುಕ್ತ
ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಬೆಳಗಾವಿ: ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ (husband) ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ (Murder case) ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದಿನಾಂಕ 17.05.2025 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿಗಳಾದ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಇವರು ತಮ್ಮ ಮೋಟಾರ್ ಸೈಕಲ್ ಮೇಲೆ ಅವರ ಸೊಸೆ ರೇಣುಕಾ ಸಂತೋಷ್ ಹೊನಕಾಂಡೆಯನ್ನು ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ರೇಣುಕಾರನ್ನು ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿದ್ದಾಳೆ ಎಂಬ ಅಪಘಾತದ ದೃಶ್ಯ ಸೃಷ್ಟಿಸಿದ್ದಾರೆ.
ಆದರೆ ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಕೊಲೆ ಎಸಗಲಾಗಿದ್ದು, ಇದರಲ್ಲಿ ಕಾಮಣ್ಣ ಹೊನಕಾಂಡೆ ಮತ್ತು ಜಯಶ್ರೀ ಹೊನಕಾಂಡೆ ಕೈವಾಡ ಕಂಡುಬಂದಿದ್ದರಿಂದ ಮತ್ತು ಕೊಲೆಗೆ ಆರೋಪಿತರ ಮಗ ಸಂತೋಷ್ ಬೆಂಬಲ ನೀಡಿದ್ದು ತಿಳಿದು ಬಂದಿದೆ. ಅಥಣಿ ಪೊಲೀಸರು ಮೂರು ಜನ ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.