ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ಬುದ್ಧಿಮಾಂದ್ಯ ಯುವತಿಯನ್ನೂ ಬಿಡದ ದುರುಳರು, ಅತ್ಯಾಚಾರಗೈದು ವಿಡಿಯೋ ಸಹೋದರನಿಗೆ ಕಳಿಸಿ ವಿಕೃತಿ

ಪಾತಕಿಗಳು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ, ವಿಡಿಯೋ ಸೋದರನಿಗೆ ಕಳಿಸಿ ವಿಕೃತಿ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Aug 9, 2025 2:15 PM

ಹಾಸನ: ಹಾಸನ ಜಿಲ್ಲೆಯಲ್ಲಿ (Hassan crime news) ದುರುಳರು ವಿಕೃತಿ ಮೆರೆದಿದ್ದು, ಬುದ್ಧಿಮಾಂದ್ಯ ಯುವತಿಯನ್ನೂ ಬಿಡದೆ ಸಾಮೂಹಿಕ ಅತ್ಯಾಚಾರ (Physical Abuse) ಮಾಡಿದ್ದಾರೆ. ಮಾತ್ರವಲ್ಲದೆ ಇದನ್ನು ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿದ್ದಾರೆ. ಘಟನೆ ಹಾಸನದ ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಪಾತಕಿಗಳು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ವಿಡಿಯೋ ನೋಡಿದ ಸಂತ್ರಸ್ತೆಯ ಕುಟುಂಬ ಶಾಕ್‌ಗೆ ಒಳಗಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹೋದರ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಹುಡುಕಾಡುತ್ತಿದ್ದು, ಜೊತೆಗೆ ಅತ್ಯಾಚಾರ ನಡೆದ ಸ್ಥಳ, ಯಾವಾಗ ನಡೆದಿದೆ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ.

ಮಂಡ್ಯದಲ್ಲಿ ರೌಡಿಶೀಟರ್‌ ಕೊಚ್ಚಿ ಕೊಲೆ

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಭೀಕರವಾಗಿ ಕೊಲೆ (Murder case) ಮಾಡಿರುವ ಘಟನೆ ಮಂಡ್ಯ (Mandya crime news) ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸಮೀಪ ಶುಕ್ರವಾರ ತಡರಾತ್ರಿ ಜರುಗಿದೆ. ರೌಡಿಶೀಟರ್ (Rowdy sheeter) ಅರುಣ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ. ಶುಕ್ರವಾರ ರಾತ್ರಿ 9.30 ವೇಳೆ ಸುಮಾರಿಗೆ ಅರುಣ್ ಮತ್ತು ಆತನ ಸ್ನೇಹಿತರು ಎಂ.ಟಿ.ಆರ್ ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಹಳೇ ವಿಚಾರವೊಂದಕ್ಕೆ ಪರಸ್ಪರ ಜಗಳ ಉಂಟಾಗಿದೆ. ಬಳಿಕ ಬಾರ್‌ನಿಂದ ಸಿಬ್ಬಂದಿಗಳು ಎಲ್ಲರನ್ನು ಹೊರಗಡೆ ಕಳುಹಿಸಿ ಜಗಳವಾಡಿಕೊಂಡಿದ್ದಾರೆ.

ಬಳಿಕ ಅರುಣ್ ಸ್ವಗ್ರಾಮ ವಡ್ಡರದೊಡ್ಡಿಗೆ ತೆರಳುವ ವೇಳೆ ಸೋಮನಹಳ್ಳಿ ಬಳಿಯ ಸ್ಕಂದ ಲೇಔಟ್ ಬಳಿ ಎಂಟತ್ತು ಮಂದಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಿ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕೆಸ್ತೂರು ಪೋಲೀಸರು ಶವವನ್ನು ಮಂಡ್ಯ ಮಿಮ್ಸ್‌ಗೆ ರವಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Crime News: ಪ್ರಿಯಕರನ ಜತೆ ಸೇರಿ ಕಿವಿಗೆ ವಿಷ ಸುರಿದು ಗಂಡನ ಕೊಲೆ; ಯೂಟ್ಯೂಬ್ ವಿಡಿಯೊ ನೋಡಿ ಕೃತ್ಯ