ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Lokeshwara Swamiji: ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಬಂಧನ; ಮಠದಲ್ಲಿ ಮಾರಕಾಸ್ತ್ರ ಪತ್ತೆ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ‌ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ಪ-ಮಗಳು ಈ ಮಠಕ್ಕೆ ಆಗಾಗ ಭೇಟಿ ನೀಡುತ್ತಿದ್ದರು. ಪರಿಚಯ ಆದ ಬಳಿಕ ಸ್ವಾಮೀಜಿ ಆಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್‌ಗಳಿ​ಗೆ ಕರೆದೊಯ್ದು 2 ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ ಎನ್ನುವ ಆರೋಪ ದಾಖಲಾಗಿದೆ.

ಲೋಕೇಶ್ವರ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಬಂಧನ

ಆರೋಪಿ ಲೋಕೇಶ್ವರ ಸ್ವಾಮೀಜಿ

ಹರೀಶ್‌ ಕೇರ ಹರೀಶ್‌ ಕೇರ May 24, 2025 10:07 AM

ಬೆಳಗಾವಿ: ಅಪ್ರಾಪ್ತ ವಯಸ್ಸಿನ ಹೆಣ್ಣುಮಗಳ ಮೇಲೆ ಅತ್ಯಾಚಾರ (Physical Abuse) ಎಸಗಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ (murder thret) ಹಾಕಿದ ಆರೋಪದಲ್ಲಿ ಬೆಳಗಾವಿಯ (Belagavi news) ರಾಮಮಂದಿರ ಮಠದ‌ ಲೋಕೇಶ್ವರ ಸ್ವಾಮೀಜಿಯನ್ನು (Lokeshwara Swamiji) ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದ ಬಳಿಕ ಯಾರಿಗೂ ಹೇಳದಂತೆ ಸ್ವಾಮೀಜಿ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗುತ್ತಿದೆ. ಅತ್ಯಾಚಾರ ವಿಚಾರ ಬಾಯಿಬಿಟ್ಟರೆ ಕೊಲೆಗೈಯ್ಯುವ ಬೆದರಿಕೆ ಹಾಕಿದ್ದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಮೂಡಲಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಎಫ್ಐಆರ್ (FIR) ದಾಖಲಿಸಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ‌ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ಪ-ಮಗಳು ಇಬ್ಬರು ಈ ಮಠಕ್ಕೆ ಆಗಾಗ ಭೇಟಿ ನೀಡುತ್ತಿದ್ದರು ಎನ್ನಲಾಗ್ತಿದೆ. ಪರಿಚಯ ಆದ ಬಳಿಕ ಸ್ವಾಮೀಜಿ ಆಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್‌ಗಳಿ​ಗೆ ಕರೆದೊಯ್ದು 2 ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

2 ದಿನಗಳ ಬಳಿಕ ಮನೆಗೆ ಬಂದ ಮಗಳನ್ನು ಎಲ್ಲಿ ಹೋಗಿದ್ದೆ ಎಂದು ಪೋಷಕರು ವಿಚಾರಿಸಿದ ಬಳಿಕ ವಿಚಾರ ಬಯಲಾಗಿದೆ. ಕೃತ್ಯವೆಸಗಿದ ಬಳಿಕ ಯಾರಿಗೂ ಹೇಳದಂತೆ ಸ್ವಾಮೀಜಿ ಬೆದರಿಕೆ ಕೂಡ ಹಾಕಿದ್ದ. ದೂರು ದಾಖಲಾಗುತ್ತಿದ್ದಂತೆ ಲೋಕೇಶ್ವರ ಸ್ವಾಮೀಜಿಯ ರಾಮಮಂದಿರ ಮಠಕ್ಕೆ ತೆರಳಿದ ಪೊಲೀಸರು ಮಠದಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಸ್ವಾಮೀಜಿಯ ಈ ಮಠದಲ್ಲಿ ಮಾರಕಾಸ್ತ್ರಗಳು ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗಿದೆ.

ಇದನ್ನೂ ಓದಿ: Physical abuse: ಸಾಂಗ್ಲಿಯಲ್ಲಿ ಬೆಳಗಾವಿಯ ವೈದ್ಯ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ; ಮತ್ತು ಬರುವ ಔಷಧ ನೀಡಿ ಕೃತ್ಯ!