ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka High Court: ಗ್ರೇಟರ್‌ ಬೆಂಗಳೂರು ಕಾಯಿದೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್‌; ಸರ್ಕಾರ, ಬಿಬಿಎಂಪಿಗೆ ನೋಟಿಸ್

Karnataka High Court: ಬಿಬಿಎಂಪಿಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ರಾಜ್ಯ ಸರ್ಕಾರದ ಹೊಸ ಕಾಯಿದೆಯಿಂದ ಚುನಾವಣೆ ಮತ್ತಷ್ಟು ವಿಳಂಬವಾಗಿದೆ. ಹಾಗಾಗಿ ಇದರಲ್ಲಿ ಸಂವಿಧಾನದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲರು ವಾದಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಕಾಯಿದೆ ಪ್ರಶ್ನಿಸಿ ಪಿಐಎಲ್‌; ಹೈಕೋರ್ಟ್ ನೋಟಿಸ್

ಹರೀಶ್‌ ಕೇರ ಹರೀಶ್‌ ಕೇರ Jul 21, 2025 1:59 PM

ಬೆಂಗಳೂರು : ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ಕಾಯಿದೆ (2025) ಅನ್ನು ಪ್ರಶ್ನಿಸಿ ಹೈಕೋ‌ರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಚಿತ್ರ ನಿರ್ದೇಶಕ ಟಿಎಸ್ ನಾಗಾಭರಣ ಮತ್ತಿತರರು ಸೇರಿ ಹೈಕೋರ್ಟ್‌ನಲ್ಲಿ ಈ ಕುರಿತು ಪಿಐಎಲ್ (PIL) ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka high court) ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ನೀಡಿ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ.

ಹೈಕೋರ್ಟ್‌ನಲ್ಲಿ ಈ ಕುರಿತು ಇಂದು ವಿಚಾರಣೆ ನಡೆಯಿತು. ಬಿಬಿಎಂಪಿಗೆ ಚುನಾವಣೆ ನಡೆದು ಹತ್ತು ವರ್ಷಗಳಾಗಿವೆ. ರಾಜ್ಯ ಸರ್ಕಾರದ ಹೊಸ ಕಾಯಿದೆಯಿಂದ ಚುನಾವಣೆ ಮತ್ತಷ್ಟು ವಿಳಂಬವಾಗಿದೆ. ಹಾಗಾಗಿ ಇದರಲ್ಲಿ ಸಂವಿಧಾನದ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಎಂಬಿ ನರಗುಂದ ವಾದ ಮಂಡಿಸಿದರು. ಬಳಿಕ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚನೆ ನೀಡಿದೆ.

2025ರ ಮೇ 15ರಂದು ರಾಜ್ಯ ಸರ್ಕಾರ ಹೊರಡಿಸಿರುವ ಗ್ರೇಟರ್‌ ಬೆಂಗಳೂರು ಆಡಳಿತ ಕಾಯಿದೆ ಪ್ರಶ್ನಿಸಿ ಚಲನಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಮತ್ತಿತರರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ನ್ಯಾಯಪೀಠ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?

ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆಯು ಸಂವಿಧಾನದ 74ನೇ ತಿದ್ದುಪಡಿ (ಸ್ಥಳೀಯ ಸಂಸ್ಥೆಗಳಿಗೆ ಸಮಾನ ಸ್ಥಾನಮಾನ ನೀಡಿ ಅಧಿಕಾರ ವಿಕೇಂದ್ರಿಕರಣಕ್ಕೆ ಅವಕಾಶ ಕಲ್ಪಿಸಿರುವುದು)ಗೆ ತದ್ವಿರುದ್ಧವಾಗಿದೆ. ಆದ್ದರಿಂದ ಕಾಯಿದೆಯು ಅಸಾಂವಿಧಾನಿಕ ಎಂಬುದಾಗಿ ಘೋಷಣೆ ಮಾಡಬೇಕು. ಬಿಬಿಎಂಪಿಗೆ ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

30 ದಿನಗಳ ಅವಧಿ ಪೂರ್ಣಗೊಳ್ಳುವ ಮೊದಲು ಯಾವುದೇ ವ್ಯಕ್ತಿಯಿಂದ ಈ ಕರಡು ಕಾಯಿದೆಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಲಾಗುವುದು. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೊಠಡಿ ಸಂಖ್ಯೆ 436, 4ನೇ ಮಹಡಿ, ವಿಕಾಸಸೌಧ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Justice Vibhu Bakhru: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ