ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Modi: ಪಹಲ್ಗಾಮ್‌ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಪ್ರವಾಸ ಮೊಟಕುಗೊಳಿಸಿದ ಮೋದಿ; ಇಂದು ರಾತ್ರಿಯೇ ರಿಟರ್ನ್‌

Pahalgam Terror Attack: ಪಹಲ್ಗಾಮ್‌ ದಾಳಿ ಬೆನ್ನಲ್ಲೇ ಸೌದಿ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ತಮ್ಮ ಅಧಿಕೃತ ಪ್ರವಾಸವನ್ನು ಮೊಟಕುಗೊಳಿಸಿ ಇಂದು ರಾತ್ರಿಯೇ ಭಾರತಕ್ಕೆ ಮರಳಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದು, ಈ ದುಷ್ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ.

ಇಂದು ರಾತ್ರಿಯೇ ಸೌದಿಯಿಂದ ಪ್ರಧಾನಿ ಮೋದಿ ರಿಟರ್ನ್‌

Profile Rakshita Karkera Apr 22, 2025 11:53 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ(Pahalgam Terror Attack) ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಇಂದು ರಾತ್ರಿ ಭಾರತಕ್ಕೆ ತೆರಳಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅವರು ಇಂದು ಮಧ್ಯಾಹ್ನಸೌದಿ ಪ್ರವಾಸ ಕೈಗೊಂಡಿದ್ದರು. ಮೂಲತಃ ಇದು ಎರಡು ದಿನಗಳ ಅಧಿಕೃತ ಪ್ರವಾಸವಾಗಿತ್ತು. ಇದೀಗ ಭೀಕರ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪ್ರವಾಸವನ್ನು ಮೊಟಕುಗೊಳಿಸಿ, ಇಂದೇ ಭಾರತಕ್ಕೆ ವಾಪಾಸಾಗುತ್ತಿದ್ದಾರೆ ಎನ್ನಲಾಗಿದೆ.

ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಖಂಡಿಸಿದ್ದು, ಈ ದುಷ್ಕೃತ್ಯ ಎಸಗಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಅವರು ಉಗ್ರರಿಗೆ ಖಡಕ್‌ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್‌ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೆ ಗುಣಮುಖರಾಗಲಿ ಎಂದು ಹಾರೈಸಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ" ಎಂದು ಅವರು ಹೇಳಿದರು.

ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಅವರನ್ನು ನಾವು ಸುಮ್ಮನರ ಬಿಡುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಅವರ ದುಷ್ಟ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದರು