Karnataka Madiga Mahasabha: ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹೋರಾಟಗಾರರನ್ನ ತಡೆದ ಪೊಲೀಸರು.
ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಜಿಲ್ಲೆಯ ನಾನಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಒಳಮೀಸಲಾತಿ ಹೋರಾಟಗಾರರು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಸುಪ್ರಿಂಕೋರ್ಟ್ ತನ್ನ ತೀರ್ಪ ನ್ನು ನೀಡಿ ಆಯಾ ರಾಜ್ಯ ಸರಕಾರಗಳು ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡಿ ತೀರ್ಪನ್ನು ನೀಡಿ ಜೂ.೧ ೨೦೨೫ಕ್ಕೆ ಒಮದು ವರ್ಷ ಪೂರ್ಣಗೊಂಡಿದೆ.

ಒಳಮೀಸಲು ಜಾರಿಗೆ ಆಗ್ರಹಿಸಿ ಕರ್ನಾಟಕ ಮಾದಿಗ ಮಹಾಸಭಾ-ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆಹಾಕಲು ವಿಫಲ ಪ್ರಯತ್ನ ನಡೆಸಿದ ನಂತರ ಜಿಲ್ಲಾಡಳಿತ ಭವನದ ಎದುರು ಅರೆಬೆತ್ತಲೆ ಚಳವಳಿ ನಡೆಸಿ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ : ಒಳಮೀಸಲು(Inner Reservation) ಜಾರಿಗೆ ಆಗ್ರಹಿಸಿ ಕರ್ನಾಟಕ ಮಾದಿಗ ಮಹಾಸಭಾ-ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನೂರಾರು ಸಂಖ್ಯೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆಹಾಕಲು ವಿಫಲ ಪ್ರಯತ್ನ ನಡೆಸಿದ ನಂತರ ಜಿಲ್ಲಾಡಳಿತ ಭವನದ ಎದುರು ಅರೆಬೆತ್ತಲೆ ಚಳವಳಿ ನಡೆಸಿ ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಜಿಲ್ಲೆಯ ನಾನಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಒಳಮೀಸಲಾತಿ ಹೋರಾಟಗಾರರು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಸುಪ್ರಿಂಕೋರ್ಟ್ ತನ್ನ ತೀರ್ಪ ನ್ನು ನೀಡಿ ಆಯಾ ರಾಜ್ಯ ಸರಕಾರಗಳು ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡಿ ತೀರ್ಪನ್ನು ನೀಡಿ ಜೂ.೧ ೨೦೨೫ಕ್ಕೆ ಒಮದು ವರ್ಷ ಪೂರ್ಣಗೊಂಡಿದೆ. ಆದರೂ ರಾಜ್ಯ ಸರಕಾರ ಜಾರಿಗೆ ಮೀನಾಮೇಷ ಎಣಿಸುತ್ತಾನಾಗಮೋಹನ್‌ದಾಸ್ ಸಮಿತಿ ರಚಿಸಿ ಸುಮ್ಮನಿದೆ ಎಂದು ಸರಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: Chikkaballapur News: ಸರಕಾರಿ ಶಾಲೆ, ವಸತಿ ಶಾಲೆ, ಅಂಗನವಾಡಿಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಈ ವೇಳೆ ಮಾತನಾಡಿದ ಮುಖಂಡ ಬಾಲಕುಂಟಹಳ್ಳಿ ಗಂಗಾಧರ್ ೧೦೧ ಪರಿಶಿಷ್ಟ ಸಮುದಾಯ ಗಳಿಗೆ ಸಮಾನ ಅವಕಾಶ ನೀಡಲು ಒಳಮೀಸಲಾತಿ ಜಾರಿ ಮಾಡಬಹುದು ಎಂದು ಸುಪ್ರಿಂ ಕೋರ್ಟ್ ತನ್ನ ತೀರ್ಪನ್ನು ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ.ಇದಕ್ಕಾಗಿ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ರಾಷ್ಟçದಾದ್ಯಂತ ಸಮುದಾಯ ಕಳೆದ ೩೫ ವರ್ಷಗಳಿಂದ ನಾನಾ ಹೋರಾಟಗಳನ್ನು ಮಾಡಿಕೊಂಡು ಬಂದಿದೆ ಆದರೂ ರಾಜ್ಯ ಸರಕಾರ ವಿಳಂಬನೀತಿ ಅನುಸರಿಸು ತ್ತಿದೆ. ತಾಳ್ಮೆಗೂ ಮಿತಿಯಿದೆ.ಈವರೆಗೆ ಹೋರಾಟದ ರೂಪುರೇಷೆಗಳನ್ನು ಬಹಿರಂಗಗೊಳಿಸಿ ಮಾಡುತ್ತಿದ್ದೆವು.ಇನ್ಮುಂದೆ ಹೇಳದೆ ಹೋರಾಟ ಮಾಡುತ್ತೇವೆ.ಇದಕ್ಕೆಲ್ಲಾ ಸರಕಾರವೇ ಹೊಣೆ ಯಾಗಲಿದೆ ಎಂದು ಹೇಳಿದರು.
ಸರ್ವೋಚ್ಚ ನ್ಯಾಯಾಲಯದ ತೀರ್ಪುನ್ನು ಜಾರಿಗೊಳಿಸಲು ಅನಗತ್ಯವಾಗಿ ವಿಳಂಬ ಮಾಡು ತ್ತಿರುವುದರಿಂದ ನಮ್ಮ ಸಮುದಾಯದಲ್ಲಿ ತೀವ್ರ ಅಸಮಾಧಾನ ಮತ್ತು ಆತಂಕಕ್ಕೆ ಕಾರಣವಾಗಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆAದರು.ಸುಪ್ರಿA ತೀರ್ಪು ಬಂದ ಕೂಡಲೇ ನಾವು ಜಾರಿಮಾಡುತ್ತೇನೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹಾಕಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಸರಕಾರವೇ ಅಧಿಕಾರದಲ್ಲಿದ್ದರೂ ಜಾರಿ ಮಾಡಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾ ವಹಿಸಿ ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯದ ವಿಷಯದಲ್ಲಿ ಮೇಲ್ಪಂಕ್ತಿ ಆಗಿದ್ದಾರೆ. ಆದರೆ ಕರ್ನಾಟಕ ಸರ್ಕಾರ ತೀವ್ರವಾದ ವಿಳಂಬ ನೀತಿ ಅನುಸರಿಸುತ್ತಿದ್ದು ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು ೨೯ ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ನಾಗಮೋಹನ್ ದಾಸ್ ಆಯೋಗಕ್ಕೆ ಸರ್ಕಾರ ಸರಿಯಾದ ರೀತಿಯಲ್ಲಿ ಸಹಕಾರ ನೀಡುತ್ತಿಲ್ಲ ಎಂದು ದೂರಿದರು.
ಪರಿಶಿಷ್ಟ ಜಾತಿಗಳ ನಡುವೆ ಮೀಸಲಾತಿ ಹಂಚಿಕೆಗೆ ನಾಗಮೋಹನ್‌ದಾಸ್ ಆಯೋಗ ನಡೆಸಿದ ಸಮೀಕ್ಷೆ, ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಹಲವು ಗೊಂದಲ ಹುಟ್ಟುಹಾಕಿದ್ದಲ್ಲದೆ ನಗೆಪಾಟಲಿಗೆ ಈಡಾಯಿತು. ಮೂರು ವಾರದಲ್ಲಿ ಸಮೀಕ್ಷೆ ಮುಗಿಸಿ ವರದಿ ಸಿದ್ಧಪಡಿಸಲಾಗುವುದು ಎಂಬ ಸರ್ಕಾರದ ಹೇಳಿಕೆ ಕಿಮ್ಮತ್ತು ಕಳೆದುಕೊಂಡಿದೆ. ಕಾಂತರಾಜ್ ಆಯೋಗದ ಜಾತಿಗಣತಿಯ ವರದಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳ ನಿರ್ಲಕ್ಷ್ಯದಿಂದ ಕೊನೆಗೆ ಕಸದ ಬುಟ್ಟಿ ಸೇರಿತು. ನಾಗ ಮೋಹನ್ ದಾಸ್ ವರದಿಯ ಬಗೆಗಿನ ಗೊಂದಲಗಳು ಸರ್ಕಾರದ ನಿರ್ಲಕ್ಷದ ಧೋರಣೆಯ ಬಗ್ಗೆ ಎಚ್ಚರಿಕೆಯ ಘಂಟೆ ಬಾರಿಸುತ್ತಿದ್ದೇವೆ.ಆಗಸ್ಟ್ ೧೧ರಿಂದ ಪ್ರಾರಂಭವಾಗುವ ವಿಧಾನ ಮಂಡಲಗಳ ಅಧಿವೇಶನದಲ್ಲಿ ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿ ಮಾಡಬೇಕೆಂಬುದು ನಮ್ಮ ಅಗ್ರಹವಾಗಿದೆ ಎಂದರು.
ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠನಗೊಳಿಸಬೇಕು. ಒಂದು ವೇಳೆ ಸರ್ಕಾರವು ಈ ಗಡುವಿನೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯ ವಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ತಮ್ಮ ಮನವಿ ಸ್ವೀಕರಿಸಲು ವಿಳಂಭ ಮಾಡಿದ್ದರಿಂದ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಪ್ರಾರಂಭಿಸಿದಾಗ ಕೆಲಕಾಲ ಪ್ರತಿಭಟನಾಕಾರರು ಮತ್ತು ಪೋಲಿಸರ ನಡುವೆ ವಾಗ್ವಾದ ನಡೆದು ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು.
ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಒಳಮೀಸಲಾತಿ ಜಾರಿ ಸಂಬAಧ ಸರಕಾರದ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಈಗಾಗಲೇ ಸಮೀಕ್ಷೆಯನ್ನು ವೈಜ್ಞಾನಿವಾಗಿ ಪೂರ್ಣಗೊಳಿಸಲಾಗಿದೆ.ಇವೆಲ್ಲಾ ಮಾಹಿತಿ ಆನ್ಲೆöÊನ್‌ನಲ್ಲಿ ಲಭ್ಯವಿವೆ.ನೀವು ನೀಡಿರುವ ಮನವಿಯನ್ನು ಕೂಡ ಸರಕಾರಕ್ಕೆ ಕಳಿಸುವ ವ್ಯವಸ್ಥೆಯನ್ನು ಮಾಡಲಾಗುವುದು.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಜಿಲ್ಲೆಯಲ್ಲಿದ್ದ ಪರಿಣಾಮ ಪ್ರತಿಭಟನಾ ಸ್ಥಳಕ್ಕೆ ಬರಲು ತಡವಾಗಿದೆ.ನಿಮ್ಮ ಮನವಿಗೆ ನಮ್ಮ ಬೆಂಬಲವಿದ್ದು ಕೂಡಲೇ ಇದನ್ನು ಸರಕಾರಕ್ಕೆ ಕಳಿಸುತ್ತೇನೆ ಎಂದು ಹೇಳಿ ಮನವಿಪತ್ರ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಯೋಜನಾ ಪ್ರಾಧಿ ಕಾರದ ಸದಸ್ಯೆ ನಾರಾಯಣಮ್ಮ, ಕರ್ನಾಟಕ ಮಾದಿಗ ಮಹಾಸಭಾ- ದಲಿತ ಸಂಘಟನೆಗಳ ಒಕ್ಕೂಟದ ಡಿ.ವಿ.ನಾರಾಯಣಸ್ವಾಮಿ, ಈಧರೆ ಪ್ರಕಾಶ್, ನಾಗರಾಜ್, ನಾಗೇಶ್, ವಿಜಯ ನಾರಸಿಂಹ,ಕಾಳಪ್ಪ,ಮಹದೇವ್ ಸೇರಿದಂತೆ ನೂರಾರು ಮಂದಿ ಇದ್ದರು.