2025ರ ಐಪಿಎಲ್ ಟೂರ್ನಿಯಲ್ಲಿ ಅಪರೂಪದ ದಾಖಲೆ ಬರೆದ ಪ್ರಿಯಾಂಶ್ ಆರ್ಯ!
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಶನಿವಾರ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ ಸ್ಪೋಟಕ 69 ರನ್ಗಳನ್ನು ಸಿಡಿಸಿದರು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಪ್ರಿಯಾಂಶ್ ವಿಶೇಷ ದಾಖಲೆಯನ್ನು ಬರೆದಿದ್ದಾರೆ.



ಕೋಲ್ಕತಾ vs ಪಂಜಾಬ್
ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 44ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಸ್ಪೋಟಕ ಅರ್ಧಶತಕ ಸಿಡಿಸಿದ ಪ್ರಿಯಾಂಶ್ ಆರ್ಯ
ಪಂಜಾಬ್ ಕಿಂಗ್ಸ್ ಪರ ಇನಿಂಗ್ಸ್ ಆರಂಭಿಸಿದ ಪ್ರಿಯಾಂಶ್ ಆರ್ಯ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದರು. ಅವರು ಆಡಿದ 35 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 8 ಬೌಂಡರಿಗಳೊಂದಿಗೆ 69 ರನ್ಗಳನ್ನು ಸಿಡಿಸಿದರು. ಬಳಿಕ ಆಂಡ್ರೆ ರಸೆಲ್ಗೆ ವಿಕೆಟ್ ಒಪ್ಪಿಸಿದರು.

120 ರನ್ಗಳ ಜೊತೆಯಾಟ
ಪಂಜಾಬ್ ಕಿಂಗ್ಸ್ ಪರ ಇನಿಂಗ್ಸ್ ಆರಂಭಿಸಿದ ಪ್ರಿಯಾಂಶ್ ಆರ್ಯ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಸ್ಪೋಟಕ ಬ್ಯಾಟಿಂಗ್ ಮಾಡಿದರು. ಈ ಜೋಡಿ ಮುರಿಯದ ಮೊದಲನೇ ವಿಕೆಟ್ಗೆ 120 ರನ್ಗಳನ್ನು ಕಲೆ ಹಾಕಿತು. ಆ ಮೂಲಕ ಪಂಜಾಬ್ ಕಿಂಗ್ಸ್ಗೆ ಭರ್ಜರಿ ಆರಂಭ ತಂದುಕೊಟ್ಟಿತ್ತು.

ವಿಶೇಷ ದಾಖಲೆ ಬರೆದ ಪ್ರಿಯಾಂಶ್ ಆರ್ಯ
2025ರ ಐಪಿಎಲ್ ಟೂರ್ನಿಯ ಅರ್ಧಕ್ಕಿಂತ ಹೆಚ್ಚಿನ ಅವಧಿಯಲ್ಲಿ ಕನಿಷ್ಠ 200 ರನ್ಗಳನ್ನು ಹೆಚ್ಚಿನ ಸ್ಟ್ರೈಕ್ ರೇಟ್ನಲ್ಲಿ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್ಮನ್ ಎಂಬ ದಾಖಲೆಯನ್ನು ಪ್ರಿಯಾಂಶ್ ಆರ್ಯ ಬರೆದಿದ್ದಾರೆ. ಪ್ರಿಯಾಂಶ್ ಆರ್ಯ 201.59ರ ಸ್ಟ್ರೈಕ್ ರೇಟ್ನಲ್ಲಿ 254 ರನ್ಗಳನ್ನು ಬಾರಿಸಿದ್ದಾರೆ.

ನಿಕೋಲಸ್ ಪೂರನ್ಗೆ ಅಗ್ರ ಸ್ಥಾನ
ಕನಿಷ್ಠ 200 ರನ್ಗಳನ್ನು ಅತಿ ಹೆಚ್ಚು ಸ್ಟ್ರೈಕ್ ರೇಟ್ನಲ್ಲಿ ಗಳಿಸಿದ ಒಟ್ಟಾರೆ ಬ್ಯಾಟ್ಸ್ಮನ್ ಎಂಬ ದಾಖಲೆ ಲಖನೌ ಸೂಪರ್ ಜಯಂಟ್ಸ್ನ ನಿಕೋಲಸ್ ಪೂರನ್ ಹೆಸರಿನಲ್ಲಿದೆ. ಅವರು 204.89ರ ಸ್ಟ್ರೈಕ್ ರೇಟ್ನಲ್ಲಿ 377 ರನ್ಗಳನ್ನು ಸಿಡಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್
2025ರ ಐಪಿಎಲ್ ಟೂರ್ನಿಯಲ್ಲಿ ಕನಿಷ್ಠ 200 ರನ್ಗಳನ್ನು ಅತಿ ಹೆಚ್ಚು ಸ್ಟ್ರೈಕ್ನಲ್ಲಿ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ಗಳ ಸಾಲಿನಲ್ಲಿ ಶ್ರೇಯಸ್ ಅಯ್ಯರ್ ಎರಡನೇ ಸ್ಥಾನದಲ್ಲಿದ್ದಾರೆ. ಇವರು 184.02ರ ಸ್ಟ್ರೈಕ್ ರೇಟ್ನಲ್ಲಿ 263 ರನ್ಗಳನ್ನು ಬಾರಿಸಿದ್ದಾರೆ.