provocative video: "ಮೋದಿ ಮನೆ ಮೇಲೆ ಬಾಂಬ್ ಹಾಕಿ" ಎಂದು ವಿಡಿಯೋ ಮಾಡಿದ ನವಾಜ್ ಬಂಧನ
ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಆರೋಪಿ ನವಾಜ್ ಎಂಬಾತ ಬಂಧಿತ. ಸಾಮಾಜಿಕ ಮೀಡಿಯಾಗಳ ಮೂಲಕ ಪ್ರಚೋದನಕಾರಿ (Provocative video) ಹೇಳಿಕೆ, ಜನರನ್ನು ಎತ್ತಿಕಟ್ಟುವುದು, ಆಡಳಿತದಲ್ಲಿರುವವರ ವಿರುದ್ಧ ಜನರಲ್ಲಿ ದ್ವೇಷ ಪ್ರಚೋದನೆ ಇತ್ಯಾದಿ ಕಾನೂನುಗಳ ಹಿನ್ನೆಲೆಯಲ್ಲಿ ಈತನ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಪ್ರಚೋದನಕಾರಿ ವಿಡಿಯೋ (Provocative video) ಮಾಡಿ ವೈರಲ್ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಪೊಲೀಸರು (Bengaluru Crime News) ಬಂಧಿಸಿದ್ದಾರೆ. ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಆರೋಪಿ ನವಾಜ್ ಎಂಬಾತನನ್ನು ಬಂಧಿಸಿದ್ದಾರೆ. ಪಬ್ಲಿಕ್ ಸರ್ವೆಂಟ್ ಎಂಬ ಐಡಿಯಲ್ಲಿ ನವಾಜ್ ವಿಡಿಯೋ ವೈರಲ್ ಮಾಡಿದ್ದ. "ಭಾರತ ಪಾಕ್ ಸಂಘರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಏಕೆ ಬಾಂಬ್ ಬೀಳ್ತಿಲ್ಲ? ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ" ಎಂದು ಈತ ವಿಡಿಯೋ ಮಾಡಿದ್ದ.
ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಇದೀಗ ಪೊಲೀಸರು ಆರೋಪಿ ನವಾಜ್‌ನನ್ನು ಬಂಧಿಸಿದ್ದಾರೆ. ಸಾಮಾಜಿಕ ಮೀಡಿಯಾಗಳ ಮೂಲಕ ಪ್ರಚೋದನಕಾರಿ ಹೇಳಿಕೆ, ಜನರನ್ನು ಎತ್ತಿಕಟ್ಟುವುದು, ಆಡಳಿತದಲ್ಲಿರುವವರ ವಿರುದ್ಧ ಜನರಲ್ಲಿ ದ್ವೇಷ ಪ್ರಚೋದನೆ ಇತ್ಯಾದಿ ಕಾನೂನುಗಳ ಹಿನ್ನೆಲೆಯಲ್ಲಿ ಈತನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಒಂದು ವಾರ ಹಿಂದೆ ಇದೇ ರೀತಿಯ ಪೋಸ್ಟ್ ಮಾಡಿದ್ದ ಇನ್ನಿಬ್ಬರು ಯುವಕರನ್ನು ಬಂಧಿಸಲಾಗಿತ್ತು.
ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದರು. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ. ಇನ್ನೊಬ್ಬಾತ ಕೋಲಾರದ ಕುಂಬಾರ ಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬಾತ. ಇವನು ಪಹಲ್ಗಾಮ್ ಉಗ್ರರ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ವಿಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದ.
ಆಸ್ತಿಗಾಗಿ ತಾಯಿ- ಮಗನ ಕೊಂದು ಪರಾರಿ
ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Crime News: ಮತ್ತೊಮ್ಮೆ ಗೋವಿನ ಮೇಲೆ ವಿಕೃತಿ, ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ