ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌, ʼನನಗೆ ಸಂಬಂಧವಿಲ್ಲʼ ಎಂದ ಶಾಸಕ

murder case: ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಶಾಸಕರು ಹೇಳಿದ್ದಾರೆ.

ರೌಡಿಶೀಟರ್‌ ಹತ್ಯೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಮೇಲೆ ಎಫ್‌ಐಆರ್‌

ಬಿಕ್ಲು ಶಿವ, ಭೈರತಿ ಬಸವರಾಜ್

ಹರೀಶ್‌ ಕೇರ ಹರೀಶ್‌ ಕೇರ Jul 16, 2025 10:38 AM

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ನಿನ್ನೆ ನಡೆದ ರೌಡಿಶೀಟರ್ Rowdy Sheeter murder case) ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಿನ್ನೆ ಬೆಂಗಳೂರು ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಬೆಂಗಳೂರಿನ ಹಲಸೂರು ಕೆರೆ ಬಳಿಯ ಆತನ ಮನೆಯ ಮುಂದೆ ನಿಂತಿದ್ದ ರೌಡಿಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.

ನನ್ನ ವಿರುದ್ಧ ಷಡ್ಯಂತ್ರ: ಭೈರತಿ

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜು ಅವರು ಪ್ರತಿಕ್ರಿಯೆ ನೀಡಿದ್ದು, ನನಗೂ ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ, ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ದೂರು ಕೊಟ್ಟರೂ ಎಫ್ ಐಆರ್ ದಾಖಲಿಸಬಹುದಾ? ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದರು.

ಈ ರೀತಿ ಒಬ್ಬರ ತೇಜೋವಧೆ ಮಾಡುವಂಥದ್ದು ಬಹಳ ನೋವಾಗುತ್ತದೆ. ನನ್ನ ಕುರಿತು ಈ ರೀತಿ ಪ್ರಚಾರ ಮಾಡುತ್ತಿರುವುದು ತುಂಬಾ ಬೇಸರ ತರಿಸಿದೆ. ಕ್ಷೇತ್ರದ ಕೆಲಸ ಜನರ ಕೆಲಸ ಬಿಟ್ಟರೆ ಬೇರೆ ಯಾವುದೇ ವ್ಯವಹಾರ ನನಗೆ ಗೊತ್ತಿಲ್ಲ. ಈ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಯಾವುದೇ ಮಾಹಿತಿ ನನಗೆ ಕೇಳದೆ ನನ್ನ ಮೇಲೆ ಪೊಲೀಸರು FIR ದಾಖಲೆ ಮಾಡುತ್ತಾರೆ. ಯಾರೋ ದೂರು ಕೊಟ್ಟ ತಕ್ಷಣ ನನ್ನ ಮೇಲೆ ಪೊಲೀಸರು ಕೇಸ್ ದಾಖಲಿಸುತ್ತಾರ? ನನ್ನ ವಿರುದ್ಧ ಯಾರು ಷಡ್ಯಂತ್ರ ಮಾಡಿದ್ದಾರೋ ಅವರ ವಿರುದ್ಧವಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ನ ಕೊಚ್ಚಿ ಕೊಲೆ