ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Byrati Basavaraj: ರೌಡಿಶೀಟರ್‌ ಹತ್ಯೆ ಆರೋಪಿ ದುಬೈಗೆ ಪರಾರಿ, ಲುಕೌಟ್‌ ನೋಟೀಸ್‌ಗೆ ಸಿದ್ಧತೆ, ಇಂದು ಬೈರತಿ ವಿಚಾರಣೆ

Murder Case: ಬಿಕ್ಲು ಶಿವ ಕೊಲೆಯಾಗಿ ಹತ್ತು ದಿನ ಕಳೆದಿದೆ. ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಆತ ಕೊಲೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿಂದ ದುಬೈಗೆ ಪರಾರಿಯಾಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ರೌಡಿಶೀಟರ್‌ ಹತ್ಯೆ ಆರೋಪಿಗೆ ಲುಕೌಟ್‌ ನೋಟೀಸ್‌, ಇಂದು ಬೈರತಿ ವಿಚಾರಣೆ

ಹತ್ಯೆಯಾದ ಶಿವ, ಆರೋಪಿ ಜಗ್ಗ

ಹರೀಶ್‌ ಕೇರ ಹರೀಶ್‌ ಕೇರ Jul 23, 2025 12:05 PM

ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ (Biklu Shiva Murder case, Rowdy Sheeter Murder case) ಪ್ರಕರಣದ ಎ1 ಆರೋಪಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗ ದುಬೈಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದ್ದು, ಈತನ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ, ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವ, ಶಾಸಕ ಬೈರತಿ ಬಸವರಾಜ್ (Byrathi Basavaraj) ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ಬಿಕ್ಲು ಶಿವ ಕೊಲೆಯಾಗಿ ಇಂದಿಗೆ ಹತ್ತು ದಿನ ಕಳೆದಿದೆ. ಕೊಲೆ ಪ್ರಕರಣದಲ್ಲಿ ಇಲ್ಲಿತನಕ ಹನ್ನೊಂದು ಜನ ಆರೋಪಿಗಳ ಬಂಧನವಾಗಿದೆ. ಆದರೆ ಎ1 ಆರೋಪಿಯಾಗಿರುವ ಜಗ್ಗ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ. ಆತ ಕೊಲೆಯ ಬಳಿಕ ಚೆನ್ನೈಗೆ ತೆರಳಿ ಅಲ್ಲಿಂದ ದುಬೈಗೆ ಪರಾರಿಯಾಗಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಜಗದೀಶ್ ಅಲಿಯಾಸ್ ಜಗ್ಗನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಜಗ್ಗ ವಿದೇಶಕ್ಕೆ ಎಸ್ಕೇಪ್ ಆಗುವ ಬಗ್ಗೆ ಮಾಹಿತಿಗಳು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಆತನ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಜಾರಿ ಮಾಡಲು ತೀರ್ಮಾನಿಸಿದ್ದಾರೆ.

ಈ ನಡುವೆ ಬೈರತಿ ಬಸವರಾಜ್ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಶುಕ್ರವಾರವೇ (ಜು.18) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಶನಿವಾರ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ‌‌. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Byrati Basavaraj: ರೌಡಿಶೀಟರ್‌ ಹತ್ಯೆ: ನಾಲ್ವರು ಸುಪಾರಿ ಕಿಲ್ಲರ್‌ಗಳ ಬಂಧನ, ನಾಳೆ ಶಾಸಕ ಬೈರತಿ ಬಸವರಾಜ್ ವಿಚಾರಣೆ