ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs ENG: 4ನೇ ಕ್ರಮಾಂಕದಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಸ್‌ ಅಯ್ಯರ್‌!

ಇಂಗ್ಲೆಂಡ್‌ ವಿರುದ್ಧದ ಮೊದಲನೇ ಏಜದಿನ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅವರು ನಾಲ್ಕನೇ ಕ್ರಮಾಂಕದಲ್ಲಿ 100ಕ್ಕೂ ಅಧಿಕ ಸ್ಟ್ರೈಕ್‌ ರೇಟ್‌ನಲ್ಲಿ 1000ಕ್ಕಿಂತ ಅಧಿಕ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ವಿಶೇಷ ದಾಖಲೆ ಬರೆದ ಶ್ರೇಯಸ್‌ ಅಯ್ಯರ್‌!

Shreyas Iyer

Profile Ramesh Kote Feb 6, 2025 11:48 PM

ನಾಗ್ಪುರ: ಇಂಗ್ಲೆಂಡ್‌ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ತಂಡ 4 ವಿಕೆಟ್‌ಗಳ ಗೆಲುವು ಪಡೆದಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಟೀಮ್‌ ಇಂಡಿಯಾ 1-0 ಮುನ್ನಡೆಯನ್ನು ಪಡೆದಿದೆ. ಈ ಪಂದ್ಯದ ಮೂಲಕ ದೀರ್ಘಾವಧಿ ಏಕದಿನ ಕ್ರಿಕೆಟ್‌ಗೆ ಮರಳಿದ ಶ್ರೇಯಸ್‌ ಅಯ್ಯರ್‌ 160ಕ್ಕೂ ಹೆಚ್ಚಿನ ಸ್ಟ್ರೈಕ್‌ರೇಟ್‌ನಲ್ಲಿ ಅರ್ಧಶತಕವನ್ನು ಸಿಡಿಸಿದರು. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಶ್ರೇಯಸ್‌ ಅಯ್ಯರ್‌ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

ಇಲ್ಲಿನ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಗುರುವಾರ ಇಂಗ್ಲೆಂಡ್‌ ನೀಡಿದ್ದ 249 ರನ್‌ಗಳನ್ನು ಗುರಿ ಹಿಂಬಾಲಿಸಿದ ಭಾರತ ತಂಡದ ಓಪನರ್ಸ್‌ ರೋಹಿತ್‌ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್‌ ಬಹುಬೇಗ ವಿಕೆಟ್‌ ಒಪ್ಪಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಶ್ರೇಯಸ್‌ ಅಯ್ಯರ್‌, ತಾವು ಎದುರಿಸಿದ ಮೊದಲನೇ ಎಸೆತದಿಂದಲೇ ಸ್ಪೋಟಕ ಬ್ಯಾಟಿಂಗ್‌ಗೆ ಹಾಕಿದರು. ಜೋಫ್ರಾ ಆರ್ಚರ್‌ಗೆ ಭರ್ಜರಿ ಸಿಕ್ಸರ್‌ ಮೂಲಕ ಶುಭಾರಂಭ ಕಂಡಿದ್ದ ಅಯ್ಯರ್‌ ಅಂತಿಮವಾಗಿ 36 ಎಸೆತಗಳಲ್ಲಿ 59 ರನ್‌ಗಳನ್ನು ಸಿಡಿಸಿದರು. ಇದರಲ್ಲಿ ಎರಡು ಸಿಕ್ಸರ್‌ ಹಾಗೂ 9 ಬೌಂಡರಿಗಳೊಂದಿಗೆ 59 ರನ್‌ಗಳನ್ನು ಸಿಡಿಸಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧ ಗೆದ್ದು ಏಕದಿನ ಸರಣಿಯಲ್ಲಿ ಶುಭಾರಂಭ ಕಂಡ ಭಾರತ!

ಅಂದ ಹಾಗೆ ಶ್ರೇಯಸ್‌ ಅಯ್ಯರ್‌ ಅವರು ನಾಲ್ಕನೇ ಕ್ರಮಾಂಕದಲ್ಲಿ ರಿಷಭ್‌ ಪಂತ್‌ ಅವರ ಜೊತೆ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಇದೀಗ ಮೊದಲನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಬಳಿಕ ಶ್ರೇಯಸ್‌ ಅಯ್ಯರ್‌ ಬಹುತೇಕ ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದ್ದಾರೆ. ಅಂದ ಹಾಗೆ ತಮ್ಮ ಸ್ಪೋಟಕ ಅರ್ಧಶತಕವನ್ನು ಸಿಡಿಸಿದ ಬಳಿಕ ದೊಡ್ಡ ದಾಖಲೆಯನ್ನು ಬರೆದಿದ್ದಾರೆ.



ನಾಲ್ಕನೇ ಕ್ರಮಾಂಕದಲ್ಲಿ ವಿಶೇಷ ದಾಖಲೆ ಬರೆದ ಶ್ರೇಯಸ್‌ ಅಯ್ಯರ್‌

ಏಕದಿನ ಕ್ರಿಕೆಟ್‌ನ ನಾಲ್ಕನೇ ಬ್ಯಾಟಿಂಗ್‌ ಕ್ರಮಾಂಕದಲ್ಲಿ 100ಕ್ಕೂ ಅಧಿಕ ಸ್ಟ್ರೈಕ್‌ರೇಟ್‌ನಲ್ಲಿ 1000 ಕ್ಕಿಂತ ಜಾಸ್ತಿ ರನ್‌ಗಳನ್ನು ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬರೆದಿದ್ದಾರೆ. ಈ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ತೋರಿದರೆ ಅದು ತಂಡಕ್ಕೆ ನೆರವಾಗುತ್ತದೆ. ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಕ್ವಿಂಟನ್‌ ಡಿ ಕಾಕ್‌ ಈ ಸಾಧನೆ ಮಾಡಿದ್ದರೆ, ಎರಡನೇ ಕ್ರಮಾಂಕದಲ್ಲಿ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಕೂಡ ಈ ಸಾಧನೆ ಮಾಡಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌ ಹಾಗೂ ಐದನೇ ಕ್ರಮಾಂಕದಲ್ಲಿ ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಬರೆದಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ವಿಶೇಷ ದಾಖಲೆ ಬರೆದ ರವೀಂದ್ರ ಜಡೇಜಾ!

ಭಾರತ ತಂಡಕ್ಕೆ 4 ವಿಕೆಟ್‌ ಜಯ

ಶ್ರೇಯಸ್‌ ಅಯ್ಯರ್‌, ಶುಭಮನ್‌ ಗಿಲ್‌ ಹಾಗೂ ಅಕ್ಷರ್‌ ಪಟೇಲ್‌ ಅವರ ಅರ್ಧಶತಕಗಳು ಹಾಗೂ ಹರ್ಷಿತ್‌ ರಾಣಾ ಮತ್ತು ರವೀಂದ್ರ ಜಡೇಜಾ ಅವರ ಬೌಲಿಂಗ್‌ ಸಹಾಯದಿಂದ ಭಾರತ ತಂಡ 4 ವಿಕೆಟ್‌ಗಳಿಂದ ಮೊದಲನೇ ಏಕದಿನ ಪಂದ್ಯವನ್ನು ಗೆದ್ದುಕೊಂಡಿದೆ. ಎರಡನೇ ಏಕದಿನ ಪಂದ್ಯ ಭಾನುವಾರ ಕಟಕ್‌ನ ಬಾರಬತಿ ಸ್ಟೇಡಿಯಂನಲ್ಲಿ ನಡೆಯಲಿದೆ.