ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

Murder Case: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ಘಟನೆ ನಡೆದಿದೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಆರೋಪದಲ್ಲಿ ಪತಿ, ಮಾವ ಹಾಗೂ ಅತ್ತೆಯನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.

ಮಕ್ಕಳಾಗಲಿಲ್ಲ ಎಂದು ಸೊಸೆಯನ್ನೇ ಕಲ್ಲಿನಿಂದ ಜಜ್ಜಿ ಕೊಂದ ಅತ್ತೆ!

Profile Prabhakara R May 19, 2025 3:30 PM

ಚಿಕ್ಕೋಡಿ: ಮಕ್ಕಳಾಗಲಿಲ್ಲ ಎಂದು ಸೊಸೆಯನ್ನು ಅತ್ತೆಯೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮಹಿಳೆ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು ಅಥಣಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​​ಗೆ ಬಸ್​ ಡಿಕ್ಕಿಯಾಗಿ ಪಿಎಸ್ಐ ಸೇರಿ ಇಬ್ಬರು ಸಾವು

ರಾಮನಗರ: ಬೈಕ್‌ಗೆ ಕೆಎಸ್‌ಆರ್​ಟಿಸಿ ಬಸ್‌ ಡಿಕ್ಕಿಯಾಗಿ ಪಿಎಸ್‌ಐ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕನಕಪುರದ ಕಗ್ಗಲೀಪುರ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್​​ಐ ನಾಗರಾಜ್‌ ಹಾಗೂ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಹಾಗೂ ಉಳಿದ ಮೂರು ಮಂದಿ ಗಾಯಾಳುಗಳನ್ನು ದಯಾನಂದ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್​ಟಿಸಿ ಬಸ್ ಕಗ್ಗಲೀಪುರದ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್​ ರಸ್ತೆ ವಿಭಜಕ ದಾಟಿ, ಪಕ್ಕದ ರಸ್ತೆಗೆ ನುಗ್ಗಿ ಎದುರಿಗೆ ಬಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ ಪಿಎಸ್​ಐ ನಾಗರಾಜ್ ಮತ್ತು ಮತ್ತೊಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳಿಕ ಬೈಕ್​ ಸಮೇತ ಬಸ್​ ಪಕ್ಕದ ತಗ್ಗುಪ್ರದೇಶಕ್ಕೆ ನುಗ್ಗಿದ್ದು, ಪಲ್ಟಿಯಾಗಿದೆೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Rain: ಧಾರಾಕಾರ ಮಳೆಗೆ ರಾಜಧಾನಿಯಲ್ಲಿ ಮೊದಲ ಬಲಿ, ಗೋಡೆ ಕುಸಿದು ಮಹಿಳೆ ಸಾವು

ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್; ಓರ್ವ ಕಾನ್‌ಸ್ಟೇಬಲ್‌ಗೆ ಗಾಯ

ಶಿವಮೊಗ್ಗ: ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಳೆ ಹೊನ್ನೂರಿನಲ್ಲಿ ನಡೆದಿದೆ.

ಕೊಲೆ ಆರೋಪಿ ಮಂಜುನಾಥ್ ಅಲಿಯಾಸ್ ಚಳಿ ಮಂಜ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆ ಹೊನ್ನೂರು ಪಿಐಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಈ ಘಟನೆಯಲ್ಲಿ ಕಾನ್‌ಸ್ಟೇಬಲ್ ಪ್ರಕಾಶ್ ಅವರಿಗೆ ಗಾಯಗಳಾಗಿದೆ. ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇ 9ರಂದು ಹೇಮಣ್ಣ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಇದೀಗ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹಾಗಾಗಿ ಆತನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸಲಾಗಿದೆ.