Mysuru News: ಕೆಆರ್‌ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರುಪಾಲು
students drowned: ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ಘಟನೆ ನಡೆದಿದೆ. ಮಂಡ್ಯದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆ ಹೋಗಿದ್ದ ವೇಳೆ ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಘಟನೆ ಕುರಿತಂತೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮೈಸೂರು: ಮೈಸೂರಿನಲ್ಲಿ ಘೋರ ದುರಂತ ನಡೆದಿದೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ಘಟನೆ ನಡೆದಿದೆ. ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾಸಕ್ಕೆ ಹೋಗಿದ್ದ ವೇಳೆ ಪ್ರಶಾಂತ್, ಸಿದ್ಧ ಮತ್ತು ಕೃಷ್ಣ ಎನ್ನುವ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ತೆರಳಿ ಮೂವರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಕುರಿತಂತೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿಸುವಂತೆ ವಿವಾಹಿತ ಮಹಿಳೆಗೆ ಕಿರುಕುಳ; ಬುದ್ಧಿ ಹೇಳಿದ ವ್ಯಕ್ತಿಯ ಕತ್ತು ಕೊಯ್ದ ಪಾಗಲ್ ಪ್ರೇಮಿ!
ಬೆಂಗಳೂರು: ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಲು ಬಂದಿ ವ್ಯಕ್ತಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಎಚ್‍ಎಎಲ್‍ನಲ್ಲಿ ನಡೆದಿದೆ. ಮಹಿಳೆಯೊಬ್ಬರಿಗೆ ತಮಿಳುನಾಡು ತಿರಪ್ಪತ್ತೂರು ಮೂಲದ ಯುವಕ ಸೆಲ್ವ ಕಾರ್ತಿಕ್ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಯುವಕನನ್ನು ಮಾತನಾಡಲು ಎಚ್‍ಎಎಲ್ ಬಳಿ ಬರಲು ಮಹಿಳೆಯ ತಂದೆ ಹಾಗೂ ಸಂಬಂಧಿಯೊಬ್ಬರು ಹೇಳಿದ್ದರು. ಈ ವೇಳೆ ಆರೋಪಿ ಕೊಲೆಗೆ ಯತ್ನಿಸಿದ್ದಾನೆ.
ಮಾತುಕತೆಗೆ ಕರೆಸಿದ್ದ ಮಹಿಳೆ ತಂದೆ ಹಾಗೂ ಸಂಬಂಧಿ, ಸೆಲ್ವ ಕಾರ್ತಿಕ್‍ನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ, ಚಲಿಸುತ್ತಿದ್ದ ಬೈಕ್‍ನಲ್ಲಿಯೇ ಆರೋಪಿ, ಸತೀಶ್ ಎಂಬವರ ಕುತ್ತಿಗೆ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ. ಗಾಯಾಳುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 17ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಬಂಧಿಸಿರುವ ಎಚ್‍ಎಎಲ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: ಲಿವ್ ಇನ್ ದುರಂತ; ಪೊಲೀಸ್ ಅಧಿಕಾರಿಯಾಗಿದ್ದ ಪ್ರೇಯಸಿಯನ್ನು ಕೊಂದ ಯೋಧ