ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Yadgir Accident: ಗುರುಮಠಕಲ್ ಬಳಿ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Gurumatkal News: ಯಾದಗಿರಿ ಜಿಲ್ಲೆಯ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್‌ನಲ್ಲಿ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ.

ಗುರುಮಠಕಲ್ ಬಳಿ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

-

Prabhakara R
Prabhakara R May 10, 2026 10:37 PM

ಯಾದಗಿರಿ: ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದುರ್ಮರಣಕ್ಕೀಡಾದ ಘಟ‌ನೆ (Yadgir Accident) ಜಿಲ್ಲೆಯ ಗುರಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಗೌಡಗೇರಾ ಗ್ರಾಮದ ಶಿವರಾಜ್ (60) ,ಬಸವಲಿಂಗ (28) ಮೃತ ದುರ್ದೈವಿಗಳು.

ಅಪಘಾತದ ಬಳಿಕ ಟ್ರ್ಯಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್‌ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ. ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹೊನ್ನಾವರದಲ್ಲಿ ಬೋಟ್‌ ಮಗುಚಿ ಓರ್ವ ಮೀನುಗಾರ ಸಾವು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಕಡಲತೀರದಲ್ಲಿ ನಡೆದಿದೆ. ಹೊನ್ನಾವರದ ಚಂದ್ರಕಾಂತ ಖಾರ್ವಿ (38) ಸಮುದ್ರ ಪಾಲಾದ ಮೀನುಗಾರನಾಗಿದ್ದಾನೆ.

ಇಂದು ಬೆಳಗ್ಗೆ ಮೀನುಗಾರಿಕೆಗೆ ಬೋಟ್ ತೆಗೆದುಕೊಂಡು ಸಮುದ್ರಕ್ಕಿಳಿದಿದ್ದ ಇಬ್ಬರು ಮೀನುಗಾರರು ಮತ್ಸ್ಯ ಬೇಟೆಯಲ್ಲಿ ತೊಡಗಿದ್ದಾಗ ಏಕಾಏಕಿ ಸಮುದ್ರದ ಬೃಹತ್ ಅಲೆ ಬೋಟ್‌ಗೆ ಅಪ್ಪಳಿಸಿದೆ. ಈ ವೇಳೆ ಬೋಟ್‌ನಲ್ಲಿದ್ದ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ. ಈ ವೇಳೆ ಚಂದ್ರಕಾಂತ ಖಾರ್ವಿ ಸಮುದ್ರದಲ್ಲಿ ಮುಳಗಿ ಸಾವು ಕಂಡರೆ, ಅದೃಷ್ಟವಶಾತ್ ಇನ್ನೋರ್ವ ಮೀನುಗಾರ ಕೇಶವ ಖಾರ್ವಿ ಪ್ರಾಣಾಪಾಯದಿಂದ ಪಾರಾಗಿದ್ದು, ಈಜಿ ದಡ ಸೇರಿದ್ದಾರೆ. ಘಟನೆ ಸಂಬಂಧ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.