ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

WI vs PAK: ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ: ತಂಡಕ್ಕೆ ಮರಳಿದ ಶೆಫರ್ಡ್

ಕಾರ್ಯದೊತ್ತಡ ನಿಭಾಯಿಸುವ ನಿಟ್ಟಿನಲ್ಲಿ ಅಲ್ಜಾರಿ ಜೋಸೆಫ್ ಅವರಿಗೆ ವಿಶ್ರಾಂತಿ ನೀಡಲಾಯಿತು. ಇದೇ ವೇಳೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ರೊಮಾರಿಯೊ ಶೆಫರ್ಡ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಶೆಫರ್ಡ್ ಐಪಿಎಲ್‌ 2025ರ ಆವೃತ್ತಿಯಲ್ಲಿ ಆರ್‌ಸಿಬಿ ಪರ ಸ್ಫೋಟಕ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನ ತೋರುವ ಮೂಲಕ ಗಮನಸೆಳೆದಿದ್ದರು.

ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ: ತಂಡಕ್ಕೆ ಮರಳಿದ ಶೆಫರ್ಡ್

Abhilash BC Abhilash BC Aug 7, 2025 4:32 PM

ಬಾರ್ಬಡೋಸ್‌: ಸತತ ಸರಣಿ ಸೋಲಿನಿಂದ ಕಂಗೆಟ್ಟಿರುವ ವೆಸ್ಟ್‌ ಇಂಡೀಸ್‌ ತವರಿನ ಪಾಕಿಸ್ತಾನ (WI vs PAK) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಿದೆ. ಟಿ20 ಸರಣಿಯಲ್ಲಿ ವಿಂಡೀಸ್ 1-2 ಅಂತರದಿಂದ ಸೋಲು ಕಂಡಿತ್ತು. ಇದೀಗ ಈ ಸೋಲಿನ ಸೇಡನ್ನು ಏಕದಿನ ಸರಣಿಯಲ್ಲಿ ತೀರಿಸಿಕೊಂಡಿತೇ ಎಂದು ಕಾದು ನೋಡಬೇಕಿದೆ.

ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯ ಶುಕ್ರವಾರ(ಆ.8) ನಡೆಯಲಿದೆ. ತಂಡವನ್ನು ಶಾಯ್‌ ಹೋಪ್‌ ಮುನ್ನಡೆಸಲಿದಾರೆ. ಎಲ್ಲಾ ಪಂದ್ಯಗಳನ್ನು ಟ್ರಿನಿಡಾಡ್‌ನ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಆಡಲಾಗುವುದು.

ಕಾರ್ಯದೊತ್ತಡ ನಿಭಾಯಿಸುವ ನಿಟ್ಟಿನಲ್ಲಿ ಅಲ್ಜಾರಿ ಜೋಸೆಫ್ ಅವರಿಗೆ ವಿಶ್ರಾಂತಿ ನೀಡಲಾಯಿತು. ಇದೇ ವೇಳೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ರೊಮಾರಿಯೊ ಶೆಫರ್ಡ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಶೆಫರ್ಡ್ ಐಪಿಎಲ್‌ 2025ರ ಆವೃತ್ತಿಯಲ್ಲಿ ಆರ್‌ಸಿಬಿ ಪರ ಸ್ಫೋಟಕ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನ ತೋರುವ ಮೂಲಕ ಗಮನಸೆಳೆದಿದ್ದರು.

ಇದನ್ನೂ ಓದಿ WI vs PAK: ಅಂತಿಮ ಎಸೆತದಲ್ಲಿ ಬೌಂಡರಿ ಬಾರಿಸಿ ಪಾಕ್‌ಗೆ ಸೋಲುಣಿಸಿದ ಹೋಲ್ಡರ್‌

ವಿಂಡೀಸ್‌ ತಂಡ

ಶಾಯ್‌ ಹೋಪ್ (ನಾಯಕ), ಜ್ಯುವೆಲ್ ಆಂಡ್ರ್ಯೂ, ಜೆಡಿಯಾ ಬ್ಲೇಡ್ಸ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಅಮೀರ್ ಜಾಂಗೂ, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಎವಿನ್ ಲೂಯಿಸ್, ಗುಡಕೇಶ್ ಮೋಟೀ, ಶೆರ್ಫೇನ್ ರುದರ್ಫೋರ್ಡ್, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್.