About Us Advertise with us Be a Reporter E-Paper

Breaking Newsರಾಜ್ಯ

ಕಾನೂನು ಕಠಿಣವಾಗಿದ್ದರೂ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿವೆ: ರಾಜೇಂದ್ರ ಬಾದಾಮಿಕರ್

ತುಮಕೂರು: ಕಾನೂನು ಕಠಿಣವಾಗಿದ್ದರೂ ಮಕ್ಕಳ ಮೇಲೆ ದೌರ್ಜನ್ಯ, ಬಾಲ್ಯವಿವಾಹಗಳು ನಿರಂತರವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜೇಂದ್ರ ಬಾದಾಮಿಕರ್ ಆತಂಕ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಭಾನುವಾರ ಬಾಲ್ಯ ವಿವಾಹ ನಿಷೇಧ ಕುರಿತು ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು ಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಸಂವಿಧಾನದಲ್ಲಿ ಹಲವು ಹಕ್ಕುಗಳನ್ನು ನೀಡಲಾಗಿದೆ. ಮಕ್ಕಳಿಗೆ ರಕ್ಷಣೆ ನೀಡುತ್ತಿದ್ದರೂ ಸಹ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿವೆ. ಮೌಡ್ಯದಿಂದ ಬಾಲ್ಯವಿವಾಹದ ಮೂಲಕ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವ ಪ್ರಯತ್ನಗಳು ಜರುಗುತ್ತಿವೆ ಎಂದರು.

ಬಾಲ್ಯ ವಿವಾಹದ ಬಗ್ಗೆೆ ಪ್ರಕರಣ ದಾಖಲಿಸಿದರೆ, ಅದು ಅಲ್ಲಿಗೆ ಮುಕ್ತಾಯವಾಗುವುದಿಲ್ಲ. ಪ್ರಕರಣಕ್ಕೆೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಸರ್ಕಾರಿ ಅಭಿಯೋಜಕರು ಸಾಕ್ಷಿಗಳನ್ನು ಕ್ರೂಢೀಕರಿಸಿ ನ್ಯಾಯಾಲಯಕ್ಕೆೆ ಸಲ್ಲಿಸಬೇಕು. ಸಾಕ್ಷ್ಯಗಳು ಇಲ್ಲದಿದ್ದರೆ ಆದೇಶ ಹೊರಡಿಸಲು ಕಷ್ಟವಾಗುತ್ತದೆ ಎಂದು ಹೇಳಿದರು.

ಜಿ.ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಕಳೆದ 6 ತಿಂಗಳಲ್ಲಿ ತುಮಕೂರು ಜಿಲ್ಲೆೆಯಲ್ಲಿ 34 ಬಾಲ್ಯ ವಿವಾಹಗಳನ್ನು ತಡೆಯಲಾಗಿದ್ದು, ಈ ಪೈಕಿ 2 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ತುಮಕೂರು ಜಿಲ್ಲೆೆಯು ಬೆಂಗಳೂರು ನಗರಕ್ಕೆೆ ಸಮೀಪದಲ್ಲಿದ್ದರೂ ಬಾಲ್ಯ ವಿವಾಹ ಪ್ರಕರಣಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗುತ್ತಿಲ್ಲ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close