About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕೇಂದ್ರ ಸರಕಾರ ತನ್ನ ತಪ್ಪು ಅರಿತುಕೊಳ್ಳಲಿ: ಠಾಕ್ರೆ

ಮುಂಬೈ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಮೊದಲು ತನ್ನ ತಪ್ಪುಗಳನ್ನು ಅರಿತುಕೊಳ್ಳಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ರಾಜ್ ಠಾಕ್ರೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರುಕಟ್ಟೆಯಲ್ಲಿ ಎಂಎನ್‌ಎಸ್, ಪೆಟ್ರೋಲ್ ಡೀಸೆಲ್ ಬೆಲೆ ಗಗನಕ್ಕೇರಿದೆ. ಹಾಗಾಗಿ ಸೋಮವಾರ ಭಾರತ್ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ. ಈ ಬಂದ್‌ಗೆ ನಮ್ಮ ಬೆಂಬಲವಿದ್ದು, ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತೇವೆ. ಇದರಿಂದ ಸಾಮಾನ್ಯ ಜನರಿಗೆ ಸಮಸ್ಯೆ ಆಗುತ್ತಿದ್ದು, ಕೇಂದ್ರ ಸರಕಾರ ಇದಕ್ಕೆ ಕಾರಣ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಸಂಪರ್ಕಿಸುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅದರ ಮೇಲೆಯೇ ಹೆಚ್ಚಿನ ತೆರಿಗೆಯನ್ನು ವಿಧಿಸಿವೆ ಎಂದು ತಿಳಿಸಿದರು. ನಿರಂತರವಾಗಿ ಹೆಚ್ಚುತ್ತಿರುವ ಇಂಧನ ಬೆಲೆಗಳು ಜನರ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಸಾಮಾನ್ಯ ಮನುಷ್ಯನನ್ನು ಗಣನೆಗೆ ತೆಗೆದುಕೊಳ್ಳಬೇಕು. ಇದೇ ಕಾರಣಕ್ಕೆ ಮಹಾರಾಷ್ಟ್ರ ಜನತೆಯ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಹಾಗೂ ರಾಜಕೀಯವನ್ನು ಬದಿಗೊತ್ತಿ ‘ಭಾರತ್ ಬಂದ್’ಗೆ ಬೆಂಬಲ ನೀಡಬೇಕು. ಇದೇ ರೀತಿ ಮಹಾರಾಷ್ಟ್ರ ಸೈನಿಕರ ಬಳಿಯೂ ಮನವಿ ಮಾಡಿಕೊಳ್ಳುತ್ತಿದ್ದೇನೆ. ಕೇಂದ್ರ ಸರಕಾರ ತನ್ನ ತಪ್ಪುಗಳನ್ನು ಅರಿತುಕೊಳ್ಳಬೇಕೆಂದು ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close