About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಸ್ಥಳೀಯ ಸಂಸ್ಥೆ ಚುನಾವಣೆ ಮತ ಎಣಿಕೆ ಆರಂಭ: ಪುತ್ತೂರು, ಶಿವಮೊಗ್ಗ ಬಿಜೆಪಿ ತೆಕ್ಕೆಗೆ

ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ.

ಆಗಸ್ಟ್ 29 ರಂದು 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಈ ವೇಳೆ ಶೇ.67 ರಷ್ಟು ಮತದಾನ ದಾಖಲಾಗಿದೆ.ಇಂದು ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಸಂಪೂರ್ಣ ಫಲಿತಾಂಶದ ಚಿತ್ರಣ ಸಿಗಲಿದೆ.

ಪುತ್ತೂರು ನಗರಸಭೆಯ 31 ಸ್ಥಾನಗಳ ಪೈಕಿ ಬಿಜೆಪಿ 25ರಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ 5 ಹಾಗು ಎಸ್‌ಡಿಪಿಐ ಒಂದು ಸ್ಥಾನಗಳಿಸಿದೆ.

ಶಿವಮೊಗ್ಗದ 35 ಕ್ಷೇತ್ರಗಳ ಪೈಕಿ ಬಿಜೆಪಿಗೆ 18ರಲ್ಲಿ ಗೆಲುವು ಲಭಿಸಿದರೆ ಮಂಡ್ಯದ 35 ಕ್ಷೇತ್ರಗಳ ಪೈಕಿ ಜೆಡಿಎಸ್‌ 18ರಲ್ಲಿ ಜಯಭೇರಿ ಮೊಳಗಿಸಿದೆ.

 

Tags

Related Articles

Leave a Reply

Your email address will not be published. Required fields are marked *

Language
Close