About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಸ್ಥಳೀಯ ಸಂಸ್ಥೆಗಳಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ..?

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಲ್ಲೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಬಗ್ಗೆ ಕಡೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯದಲ್ಲಿ ಮೈತ್ರಿ ಸರಕಾರ ಅಸ್ತಿತ್ವದಲ್ಲಿದೆ. ಮೈತ್ರಿ ಸರ್ಕಾರದ ಈ ಸನ್ನಿವೇಶದಲ್ಲಿ ಅತಂತ್ರ ಇರುವೆಡೆಗಳಲ್ಲಿ ಕಾಂಗ್ರೆಸ್-ದಳ ಎಲ್ಲ ಕಡೆಗಳಲ್ಲೂ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದರು.

ಹಾಸನದಲ್ಲಿ ಬಿಜೆಪಿ ಸ್ಥಾನಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಕೆಲವೆಡೆ ಅತಂತ್ರ ಪರಿಸ್ಥಿತಿ ಹಿನ್ನೆಲೆ ಪೂರ್ಣ ಫಲಿತಾಂಶ ಪ್ರಕಟವಾದ ನಂತರ ಈ ಬಗ್ಗೆ ಮಾತನಾಡುತ್ತೇನೆ. ಜೆಡಿಎಸ್-ಕಾಂಗ್ರೆಸ್ ಒಟ್ಟಿಗೆ ಇರುತ್ತದೆ ಎಂದು ತಿಳಿಸಿದರು. ದೇವೇಗೌಡರು ಈಗಾಗಲೇ ಮೈತ್ರಿಗೆ ಒಪ್ಪಿಗೆ ನೀಡಿದ್ದು ಕಾಂಗ್ರೆಸ್ ಕಡೆಯಿಂದ ಈ ಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

Tags

Related Articles

Leave a Reply

Your email address will not be published. Required fields are marked *

Language
Close