About Us Advertise with us Be a Reporter E-Paper

Breaking Newsರಾಜ್ಯ

ತುಮಕೂರು ಪಾಲಿಕೆ ಚುನಾವಣೆ: ಅತಂತ್ರ ಸ್ಥಿತಿ ನಿರ್ಮಾಣ, ಕೈ-ದಳ ಮೈತ್ರಿ..?

ಬಿಜೆಪಿ 12, ಕಾಂಗ್ರೆಸ್ 10, ಜೆಡಿಎಸ್ 10, ಪಕ್ಷೇತರರು 3

ತುಮಕೂರು: ತುಮಕೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಸೋಮವಾರ ಹೊರಬಿದ್ದಿದ್ದು, ಬಿಜೆಪಿ 12, ಕಾಂಗ್ರೆಸ್ 10, ಜೆಡಿಎಸ್ 10, ಪಕ್ಷೇತರರು 3 ಸ್ಥಾನಗಳಿಸುವ ಮೂಲಕ ಚೊಚ್ಚಲ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಪಾಲಿಕೆ ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.

ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಮೂರು ಪಕ್ಷದ ಮುಖಂಡರಿಗೆ ನಿರಾಸೆ ಉಂಟಾಗಿದೆ. ಸ್ವತಂತ್ರವಾಗಿ ಜಯಗಳಿಸಿರುವ ಮೂರು ಅಭ್ಯರ್ಥಿಗಳಿಗೆ ಡಿಮ್ಯಾಂಡ್ ಇಲ್ಲದಂತಾಗಿದೆ. ಪ್ರತಿಪಕ್ಷ ಸ್ಥಾನದಲ್ಲಿ ಬಿಜೆಪಿ ಕೂರವ ಲಕ್ಷಣ ಕಂಡುಬಂದಿದೆ.

ತುಮಕೂರು ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಅತಿ ಹೆಚ್ಚು ಪಡೆದು ವಿಜೇತರಾದವರ ಹೆಸರನ್ನು ಚುನಾವಣಾಧಿಕಾರಿ ಘೋಷಿಸಿ, ಪ್ರಮಾಣಪತ್ರ ವಿತರಿಸಿದರು. ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ. ಚುನಾವಣೆ ಮತ ಎಣಿಕೆ ಕೇಂದ್ರದಲ್ಲಿದ್ದು, ಮತ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯುವಂತೆ ನೋಡಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ಗೋಪಿನಾಥ್ ನೇತೃತ್ವದಲ್ಲಿ ಮತ ಎಣಿಕೆ ಕೇಂದ್ರದ ಸುತ್ತಲೂ ವ್ಯಾಪಕ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು.

ಪಾಲಿಕೆ ಚುನಾವಣೆಯಲ್ಲಿ ಮತದಾರರು ನೀಡಿರುವ ಜನಾಶೀರ್ವಾದಕ್ಕೆ ತಲೆಬಾಗುತ್ತೇವೆ. ಕೈ-ದಳ ಒಪ್ಪಂದ ಮಾಡಿಕೊಂಡು ಅಧಿಕಾರ ಹಿಡಿಯುವ ಬಗ್ಗೆ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಡಾ.ರಫೀಕ್ ಅಹಮದ್, ಮಾಜಿ ಶಾಸಕ.

ಮೊದಲ ಬಾರಿಗೆ ನಡೆದ ಪಾಲಿಕೆ ಪೈಟ್‌ನಲ್ಲಿ ವಿಪಕ್ಷಗಳಿಗಿಂತ ಬಿಜೆಪಿ ಹೆಚ್ಚಿನ ಸ್ಥಾನ ತೆಗೆದುಕೊಂಡಿದೆ. ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪಿಕೊಂಡು, ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ.

ಪಾಲಿಕೆ ಮತದಾರರು ಒಂದು ಪಕ್ಷಕ್ಕೆ ಬಹುಮತ ನೀಡಿಲ್ಲ. ಇದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮತದಾರರ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ಕೈ-ದಳ ಮೈತ್ರಿ ಬಗ್ಗೆ ಮುಖಂಡರೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ.

ಚನ್ನಿಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ.

Tags

Related Articles

Leave a Reply

Your email address will not be published. Required fields are marked *

Language
Close