About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಶೌಚಾಲಯಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಚಾಲಕ ಮೃತ

ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿ ಬದಿಯ ಶೌಚಾಲಯಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ಈ ಅವಘಡ ಸಂಭವಿಸಿದ್ದು ಸ್ಥಳದಲ್ಲೇ ಚಾಲಕ ಮೃತಪಟ್ಟದ್ದಾನೆ.

ಲಾರಿ ಚಾಲಕ ಜಾವೀದ್​ ಅತ್ತಾರ (49) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈತ ಬೆಳಗಾವಿ ಜಿಲ್ಲೆಯ ಅನಗೋಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಮೃತನ ಸಂಬಂಧಿಕರ ರೋದನ ಮುಗಿಲುಮುಟ್ಟಿತ್ತು. ಅಪಘಾತಕ್ಕೆ ಸಂಬಂಧಿಸಿದಂತೆ ಸಂಕೇಶ್ವರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close