ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಚ್‌ಡಿಕೆ
ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಸರಣಿ ಆರಂಭವಾಗಿದೆ. ನೂರಾರು ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಸಾಕಷ್ಟು ಕಡೆ ಸಂಪೂರ್ಣ ಬೆಳೆ ಹಾನಿಯಾಗಿದೆ. ಈ ಸರ್ಕಾರದವರು ನೋಡಿದರೆ ರೈತರ ನೆರವಿಗೆ ಹೋಗುವುದನ್ನು ಬಿಟ್ಟು ಹೊಲದಲ್ಲಿ ನಿಂತು ಫೋಟೋಗೆ ಪೋಸ್ ಕೊಟ್ಟು ಬರುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.