About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮೊಟ್ಟ ಮೊದಲ ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ

ಮಂಗಲ್ ಪಾಂಡೆ ಎಂಬ ಹೆಸರು ಭಾರತೀಯ ಸೈನಿಕರ ಪಾಲಿಗೆ, ದೇಶಭಕ್ತರ ಪಾಲಿಗೆ ಒಂದು ಸ್ಫೂರ್ತಿ ಮಂತ್ರವೇ ಸರಿ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದ ಮಂಗಲ್ ಪಾಂಡೆ (ಜುಲೈ 19, 1827- ಏಪ್ರಿಲ್ 8, 1857) ಯವರ 191 ನೇ ಜನ್ಮದಿನ ಇಂದು.

 ಮಂಗಲ್ ಪಾಂಡೆ ಭೂಮಿಹಾರ್ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರು. ಅವರು 22ನೇ ವಯಸ್ಸಿನಲ್ಲಿ1849 ರಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೇರಿದರು. ಪಾಂಡೆ 34 ನೇ ಬಂಗಾಳ ಸ್ಥಳೀಯ ಪದಾತಿದಳದ 6ನೇ ಕಂಪನಿ ಭಾಗವಾಗಿದ್ದರು ,ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು.

ಮಂಗಲ್ ಪಾಂಡೆ ಹೆಸರು ಇತಿಹಾಸದಲ್ಲಿ ಅಜರಾಮರವಾಗುವುದಕ್ಕೆ ಸಂದರ್ಭ ಸೃಷ್ಟಿಯಾಗಿದ್ದು, 1857, ಮಾರ್ಚ್ ನಲ್ಲಿ. ಆ ಸಂದರ್ಭದಲ್ಲಿ ಬ್ರಿಟೀಷ್ ಸರಕಾರ ಹೊಸದಾಗಿ ಪರಿಚಯಿಸಿದ್ದ ಎನ್‌ಫೀಲ್ಡ್ ಪಿ-53 ರೈಫಲ್ ಗಳ ಬುಲೆಟ್ ಕಾರ್ಟ್ರಿಜ್ ಗೆ ಹಸು ಮತ್ತು ಹಂದಿಯ ಮಾಂಸವನ್ನು ಸವರಲಾಗಿತ್ತು. ಈ ಸಂದರ್ಭದಲ್ಲಿ ಕಾಟ್ರಿಜ್ ನ ಹಿಂಭಾಗವನ್ನು ಕಚ್ಚಬೇಕಿತ್ತು.

ಈ ವಿಷಯ ತಿಳಿಯುತ್ತಿದ್ದಂತೆಯೇ ಸೇನೆಯಲ್ಲಿದ್ದ ಹಿಂದು ಮತ್ತು ಮುಸ್ಲಿಂ ಸೈನಿಕರು ಉದ್ರಿಕ್ತರಾಗಿದ್ದರು. ಏಕೆಂದರೆ ಹಸು ಹಿಂದುಗಳಿಗೆ ಪೂಜನೀಯ. ಹಂದಿ ಎಂದರೆ ಮುಸ್ಲಿಮರಿಗೆ ವರ್ಜ್ಯ. ಎರಡು ಮತಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಇಂಥ ಕೆಲಸ ಸಾಧ್ಯವಿಲ್ಲ ಎಂದು ಸಿಪಾಯಿಗಳು ವಿರೋಧಿಸಿದ್ದರು.

ಬ್ರಿಟೀಷರ ಬಿಗುಮುಷ್ಟಿಯಿಂದ ಸ್ವಾತಂತ್ರ್ಯ ಪಡೆವ ಹುಮ್ಮಸ್ಸಿನಲ್ಲಿದ್ದ ಬಿಸಿರಕ್ತಕ್ಕೆ ನೆಪವೊಂದು ಬೇಕಿತ್ತು. ಇದೇ ವಿಷಯವನ್ನಿಟ್ಟುಕೊಂಡು ಮಂಗಲ್ ಪಾಂಡೆ, 1857, ಮಾರ್ಚ್ 29 ರಂದು ಬ್ರಿಟಿಷ್ ಅಧಿಕಾರಿ ಮೇಜರ್ ಹ್ಯೂಸನ್ ಮತ್ತು ಲೆಫ್ಟಿನಂಟ್ ಭಾಘ್ ಮೇಲೆ ಗುಂಡಿನ ದಾಳಿ ನಡೆಸಿ ಅವರಿಬ್ಬರನ್ನೂ ಕೊಂದರು. ನಂತರ ಬ್ರಿಟೀಷ್ ಸೇನೆ ಮಂಗಲ್ ಪಾಂಡೆಯವರನ್ನು ಬಂಧಿಸಿತ್ತು.

ಈ ಸಂದರ್ಭದಲ್ಲಿ ಆತ್ಮಾರ್ಪಣೆ ಮಾಡಿಕೊಳ್ಳುವುದಕ್ಕೆ ಹೊರಟ ಪಾಂಡೆ ಪ್ರಯತ್ನವೂ ವಿಫಲವಾಗಿತ್ತು. ಗಾಯಗೊಂಡಿದ್ದ ಪಾಂಡೆಯವರನ್ನು ಬ್ರಿಟೀಶ್ ಸರಕಾರದ ಆದೇಶದ ಮೇರೆಗೆ ಏಪ್ರಿಲ್ 8 (1857)ರಂದು ಬ್ಯಾರಕ್‌ಪುರ(ಕೋಲ್ಕತ್ತ)ದಲ್ಲಿ ಗಲ್ಲಿಗೇರಿಸಲಾಯಿತು.

Tags

Related Articles

Leave a Reply

Your email address will not be published. Required fields are marked *

Language
Close