ಗೋವಾ ಸಿಎಂ ಚೇತರಿಕೆ, ಶುಕ್ರವಾರ ಭಾರತಕ್ಕೆ ವಾಪಸ್‌

Posted In : ದೇಶ

ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಅವರು ಶುಕ್ರವಾರ ವಾಪಸಾಗಲಿದ್ದಾರೆ.

ಈ ಸಂಬಂಧ ಗೋವಾದ ಮುಖ್ಯಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದ್ದು, ಜೂ.15ರಂದು ಪರಿಕ್ಕರ್ ಗೋವಾಗೆ ಮರಳಲಿದ್ದಾರೆ ಎಂದು ತಿಳಿಸಿದೆ.

ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಪರಿಕ್ಕರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳು ವಿಡಿಯೋವೊಂದನ್ನು ಕಳುಹಿಸಿದ ಪರಿಕ್ಕರ್, ತಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಶೀಘ್ರದಲ್ಲೇ ತಾಯ್ನಾಡಿಗೆ ಮರಳಿ ಬರುವುದಾಗಿ ತಿಳಿಸಿದ್ದರು.

ಪರಿಕ್ಕರ್ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳುವ ಮುಂಚೆ ಮುಂಬೈನಲ್ಲಿರುವ ಲೀಲಾವತಿ ಆಸ್ಪತ್ರೆಗೆ ಫೆಬ್ರವರಿ 15 ರಂದು ದಾಖಲಾಗಿದ್ದರು. ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದರು.

One thought on “ಗೋವಾ ಸಿಎಂ ಚೇತರಿಕೆ, ಶುಕ್ರವಾರ ಭಾರತಕ್ಕೆ ವಾಪಸ್‌

Leave a Reply

Your email address will not be published. Required fields are marked *

six − one =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top