About Us Advertise with us Be a Reporter E-Paper

Breaking Newsದೇಶ
Trending

ಕೊನೆಗೂ ಮರಾಠರಿಗೆ ಸಿಕ್ಕಿತು ಮೀಸಲಾತಿ ಭಾಗ್ಯ!

ಮುಂಬೈ: ಮರಾಠ ಸಮುದಾಯಕ್ಕೆ ಉದ್ಯೋಗ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ

ಇದರಿಂದಾಗಿ ಮರಾಠ ಮೀಸಲಾತಿಗೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ಮರಾಠಾ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದಂತಾಗಿದೆ. ಮೀಸಲಾತಿಗೆ ಅಗತ್ಯವಿರುವ ಕಾನೂನು ಪ್ರಕ್ರಿಯೆಗಳು ಈ ತಿಂಗಳಲ್ಲಿ ಮುಗಿಯಲಿದ್ದು, ಡಿ. 1ರಿಂದ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಶೇ.52 ಮೀಸಲಾತಿ ಇದ್ದು, ಇದೀಗ ಮರಾಠಾ ಸಮುದಾಯಕ್ಕೆ ಶೇ.16 ಮೀಸಲು ಸಿಗುವ ಸಾಧ್ಯತೆ ಇದೆ. ಹೀಗಾದಲ್ಲಿ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. 68 ತಲುಪಲಿದೆ.

Tags

Related Articles

Leave a Reply

Your email address will not be published. Required fields are marked *

Language
Close