About Us Advertise with us Be a Reporter E-Paper

Breaking Newsದೇಶಪ್ರಚಲಿತ

ಬಿಜೆಪಿಗೆ ಅನುಕೂಲ ಮಾಡಿಕೊಡಲು ಬಿಎಸ್ಪಿ ಹೊಸ ಪಕ್ಷದೊಂದಿಗೆ ಮೈತ್ರಿ : ಕಾಂಗ್ರೆಸ್ ಆರೋಪ

ರಾಯ್‌ಪುರ: ಬಿಜೆಪಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಛತ್ತೀಸ್‌ಗಢದಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿ ಮತ್ತು ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ನೇತೃತ್ವದ ಹೊಸ ಪಕ್ಷ ಹೊಂದಾಣಿಕೆ ಮಾಡಿಕೊಂಡಿವೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಈ ವರ್ಷಾಂತ್ಯದಲ್ಲಿ ಛತ್ತೀಸ್‌ಗಢ ವಿಧಾನಸಬೆಗೆ ಚುನಾವಣೆ ನಡೆಯಲಿದ್ದು, ಬಿಎಸ್‌ಪಿ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ಬಯಸಿತ್ತು. ಆದರೆ ಜೋಗಿ ಅವರ ಹೊಸ ಪಕ್ಷದೊಂದಿಗೆ ಹೊಂದಾಣಿಕೆ ಬಿಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೇಲ್ ಮಾತನಾಡಿ ಂಭೀರವಾದ ಆರೋಪಗಳನ್ನು ಎದುರಿಸುತ್ತಿರುವುದರಿಂದಲೇ ಮಾಯಾವತಿ ಅವರು ಜೋಗಿ ಅವರ ಹೊಸ ಪಕ್ಷ ಜನತಾ ಕಾಂಗ್ರೆಸ್ ಚತ್ತೀಸ್‌ಗಢ(ಜೆಸಿಸಿ)ದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಗೆ ಪರೋಕ್ಷವಾಗಿ ನೆರವಾಗಲು ಮುಂದಾಗಿದ್ದಾರೆ ಎಂದಿದ್ದಾರೆ.

ಮಾಯಾವತಿ ಅವರ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಒತ್ತಡ ಹೇರಿವೆ. ಬಿಜೆಪಿಯ ನೆರವಿನಿಂದಲೇ ಈ ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದು, ರಾಜ್ಯದ ಜನತೆ ಈ ಹುನ್ನಾರವನ್ನು ಮಾಡಿಕೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಎಸ್‌ಪಿ-ಜೆಸಿಸಿ ಮೈತ್ರಿಯಿಂದ ಬಿಜೆಪಿಗೆ ಯಾವುದೇ ಆತಂಕ ಇಲ್ಲ. ಬಿಎಸ್‌ಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಕನಸು ನುಚ್ಚು ನೂರಾಗಿದ್ದರಿಂದ ಹತಾಶ ಭಾವನೆಯಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆ ನೀಡುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಧರ್ಮಲಾಲ್ ಕೌಶಿಕ್ ರಾಜ್ಯ ವಿಧಾನಸಭೆಯ 90 ಸ್ಥಾನಗಳಲ್ಲಿ 65ರಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಜಿತ್ ಜೋಗಿ ಅವರ ಪುತ್ರ ಶಾಸಕ ಅಮಿತ್ ಪ್ರತಿಕ್ರಿಯಿಸಿ ಹೊಂದಾಣಿಕೆ ಮಾತ್ರ ಬಿಜೆಪಿಯನ್ನು ಮತ್ತೆ ಅಧಿಕಾರದಿಂದ ದೂರವಿಡಲು ಶಕ್ತವಾಗಿದೆ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುವ ಹಡಗು ಎನ್ನುವುದನ್ನು ಬಿಎಸ್‌ಪಿ ನಾಯಕಿ ಅರ್ಥ ಮಾಡಿಕೊಂಡಿದ್ದಾರೆ. ರಾಜ್ಯದ ಜನತೆ ಬದಲಾವಣೆ ಬಯಸಿದ್ದು, ಈ ಹೊಸ ಮೈತ್ರಿಯತ್ತ ಆಶಾ ಭಾವನೆ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

ಜೆಸಿಸಿ 55 ಮತ್ತು ಬಿಎಸ್‌ಪಿ 35 ಸ್ಥಾನಗಳಲ್ಲಿ ಸ್ಪರ್ಧಿಸಲು ಸೀಟು ಹಂಚಿಕೆ ಮಾಡಿಕೊಂಡಿವೆ. ಕಾಂಗ್ರೆಸ್‌ನಿಂದ ಹೊರಬಂದ ಅಜಿತ್ ಜೋಗಿ 2016ರಲ್ಲಿ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close