About Us Advertise with us Be a Reporter E-Paper

Breaking Newsರಾಜ್ಯ

ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಡಿ.ಕೆ.ಶಿ

ಮೈಸೂರು: ಕಡೆಯ ಆಷಾಢ ಶುಕ್ರವಾರ ಹಿನ್ನೆಲೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ನಾಡಿನ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇವಿಯ ಆಶೀರ್ವಾದದಿಂದ ಉತ್ತಮ ಮಳೆ, ಬೆಳೆ ಆಗುತ್ತಿದೆ. ಪ್ರವಾಹ ಉಂಟಾಗುವಂಥ ಸ್ಥಳಗಳಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ನಾನು ಇಲ್ಲಿ ರಾಜಕೀಯ ಮಾತನಾಡಲು ಬಂದಿಲ್ಲ ಎಂದು ಇದೇ ವೇಳೆ ಹೇಳಿದರು.

ಇನ್ನು ಸಾಲಮನ್ನಾ ಸ್ಪಷ್ಟನೆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಡಿ.ಕೆ.ಶಿವಕುಮಾರ್, ಸಾಲಮನ್ನಾ ವಿಚಾರದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತದೆ. ಎಲ್ಲವನ್ನೂ ತಾಯಿ ಚಾಮುಂಡಿದೇವಿ ನೋಡಿಕೊಳ್ಳುತ್ತಾಳೆ ಎಂದರು.

Tags

Related Articles

Leave a Reply

Your email address will not be published. Required fields are marked *

Language
Close