About Us Advertise with us Be a Reporter E-Paper

Breaking NewsUncategorizedದೇಶಪ್ರಚಲಿತ

ಎಂಎಲ್‌‌ಎ, ಎಂಪಿಗಳ ವಿರುದ್ಧ ಪ್ರಕರಣಗಳು: ಮಾಹಿತಿ ನೀಡುಲು ರಾಜ್ಯಗಳಿಗೆ ಸುಪ್ರೀಂ ಗಡುವು

ದೆಹಲಿ: ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯಗಳು ಮತ್ತು ಎಷ್ಟು ನ್ಯಾಯಾಲಯಗಳ ಅವಶ್ಯಕತೆ ಇದೆ ಎಂಬ ಮಾಹಿತಿ ನೀಡಲು ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಮೂರು ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.

ನಿಗಧಿತ ಅವಧಿಯೊಳಗೆ ಮಾಹಿತಿ ನೀಡದಿದ್ದರೆ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್‌ ಜಾರಿಗೊಳಿಸುವುದಾಗಿಯೂ ನ್ಯಾಯಾಲಯ ಎಚ್ಚರಿಕೆ ನೀಡಿದೆ.ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ನೇತೃತ್ವದ ಪೀಠ ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆೆ ಸಹಕರಿಸಲು ವಿಜಯ್ ಹನ್ಸಾರಿಯಾ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಕ ಮಾಡಿದೆ.

ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಸಂಸತ್ ಸದಸ್ಯರು ಮತ್ತು ವಿಧಾನಸಭಾ ಸದಸ್ಯರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆಯನ್ನು 2017ರ ಡಿಸೆಂಬರ್1ರಂದು ಮೊದಲ ಬಾರಿಗೆ ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಕೇಳಿತ್ತು.

ಇದುವರೆಗೆ ಕರ್ನಾಟಕ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಕೇರಳ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ದೆಹಲಿ ಮತ್ತು ತೆಲಂಗಾಣ ಮಾತ್ರ ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಮಾಹಿತಿ ನೀಡಿವೆ.

ಕ್ರಿಮಿನಲ್ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಗಳಿಗೆ ಹಸ್ತಾಂತರಿಸಲಾಗಿದೆಯೇ ಎಂಬ ಮಾಹಿತಿಯನ್ನು ಕೇಳಿರುವ ಕೋರ್ಟ್, ಇದುವರೆಗೂ ಸ್ಥಾಪಿಸಲಾಗಿರುವ ನ್ಯಾಯಾಲಯಗಳ ಮಾಹಿತಿ ನೀಡುವಂತೆಯೂ ರಾಜ್ಯಗಳಿಗೆ ಸೂಚಿಸಿದೆ. ದೆಹಲಿ ಮಾತ್ರ ಎರಡು ನ್ಯಾಯಾಲಯ ಸ್ಥಾಪಿಸಿದೆ. ಹತ್ತು ರಾಜ್ಯಗಳು ತಲಾ ಒಂದು ನ್ಯಾಯಾಲಯವನ್ನು ಸ್ಥಾಪಿಸಿವೆ. ಇದೀಗ ಎಲ್ಲ ರಾಜ್ಯಗಳು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಇಲ್ಲವೇ ನ್ಯಾಯಂಗ ನಿಂದನೆ ಮೊಕದ್ದಮೆಯನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close