About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಶಾಸಕ ಬಿ.ಸಿ.ಪಾಟೀಲ್‍ಗೆ ಧೈರ್ಯ ತುಂಬಿದ ಸುತ್ತೂರು ಶ್ರೀ!

ಹಾವೇರಿ: ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಬೇಸರಗೊಂಡಿರುವ ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಅವರಿಗೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಧೈರ್ಯ ತುಂಬಿದ್ದಾರೆ.

ಹೌದು, ಈ ವಿಚಾರವನ್ನು ಸ್ವತಃ ಬಿ.ಸಿ.ಪಾಟೀಲ್ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ”ಧೈರ್ಯಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ” ಎಂದು ಸ್ವಾಮೀಜಿ ಧೈರ್ಯ ತುಂಬಿದ್ದಾರೆ ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿಕೊಂಡಿದ್ದಾರೆ.

ಇಂದು ಬೆಳಗ್ಗೆ ಕರೆ ಮಾಡಿದ ಸುತ್ತೂರು ಶ್ರೀಗಳು, ಸಚಿವ ಸ್ಥಾನದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಸ್ವಾಮೀಜಿ ಬಿ.ಸಿ ಪಾಟೀಲ್ ಅವರಿಗೆ ಮಂತ್ರಿ ಪದವಿ ಸಿಗದಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಶಾಸಕರನ್ನು ಸಮಾಧಾನಿಸಿ ಸ್ವಾಮೀಜಿ ಧೈರ್ಯ ತುಂಬಿದ್ದಾರೆ. ಇಂತಹ ಶ್ರೀಗಳು ಲಿಂಗಾಯತರಲ್ಲಿ ಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಬಿ.ಸಿ.ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಅವರು ತಂದೆಗೆ ಸಚಿವ ಸ್ಥಾನ ಸಿಗದೇ ಇದ್ದುದ್ದಕ್ಕೆ ಹೈಕಮಾಂಡ್ ವಿರುದ್ಧ ಕಿಡಿಕಾರಿ ಅಸಮಾಧಾನ ಹೊರಹಾಕಿದ್ದರು.

Tags

Related Articles

One Comment

  1. ನಿನ್ನಂತಹವರಿಗೆ ಮಾನ ಮರ್ಯಾದೆ ಏನು ಇಲ್ಲ, ಮಂತ್ರಿಯಾಗದಿದ್ದರೆ ಜನಸೇವೆ ಮಾಡುವುದಕ್ಕೆ ಆಗುವುದಿಲ್ಲವೇ? ನೀವೆಲ್ಲ ನಮ್ಮ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರಿಂದ ಕಲಿಯಬೇಕಾದ್ದು ಬಹಳ ಇದೆ. ಅವರು ಮಂತ್ರಿಯಾಗದೆ ಇದ್ದರೂ ಜನಾನುರಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

Language
Close