About Us Advertise with us Be a Reporter E-Paper

Breaking Newsರಾಜ್ಯ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ರಮೇಶ್ ಜಾರಕಿಹೊಳಿ..?

ಬೆಳಗಾವಿ: ಸಮ್ಮಿಶ್ರ ಸರಕಾರದ ಸಂಪುಟ ಪುನಾರಚನೆಯಾದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಸಚಿವ ಸ್ಥಾನದಿಂದ ಕೈಬಿಟ್ಟ ವಿಚಾರವಾಗಿ ಆಪ್ತವಲಯದಲ್ಲಿ ಅಸಮಾಧಾನ ಹೊರ ಹಾಕಿರುವ ರಮೇಶ್ ಜಾರಕಿಹೊಳಿ, “ಸಚಿವ ಸ್ಥಾನವೇ ಹೋಯ್ತು, ಇನ್ನು ಶಾಸಕ ಸ್ಥಾನ ಯಾಕೆ ಬೇಕು?” ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ”ನನ್ನೊಂದಿಗೆ ಎಷ್ಟು ಮಂದಿ ಶಾಸಕರಿದ್ದಾರೆ ಅನ್ನೊಂದನ್ನು ಈಗ ಹೇಳಲ್ಲ. ಒಂದು ವಾರ ಕಾದು ನೋಡಿ, ಎರಡು ಮೂರು ದಿನಗಳಲ್ಲಿ ರಾಜೀನಾಮೆ ನೀಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ. ಆದರೆ ನಾನು ಬೇಕಾದರೆ ನಾಳೆಯೇ ರಾಜೀನಾಮೆ ನೀಡಬಹುದು” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿಯನ್ನು ಸಚಿವ ಸಂಪುಟದಿಂದ ಕೈಬಿಟ್ಟ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಾರಕಿಹೊಳಿ ಆಪ್ತ ಕಾಂಗ್ರೆಸ್ ಎಂಎಲ್‍ಸಿ ವಿವೇಕ್ ರಾವ್ ಪಾಟೀಲ್ ಸೇರಿದಂತೆ, ಹಲವು ಮುಖಂಡರು ರಮೇಶ್ ಅವರು ಯಾವುದೇ ನಿರ್ಧಾರ ಕೈಗೊಂಡರೂ ನಮ್ಮ ಬೆಂಬಲವಿರುತ್ತದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close