ಒವೈಸಿ ಕಾಲಿಗೆ ಬಿದ್ದ ಮೋದಿ: ಫೋಟೋ ಚಿತ್ರಿಸಿದಾತ ಅರೆಸ್ಟ್

Posted In : ಕೊಪ್ಪಳ, ರಾಜ್ಯ

ಕೊಪ್ಪಳ: ಪ್ರಧಾನಿಯವರು ಓವೈಸಿ ಕಾಲಿಗೆ ಬಿದ್ದು ನಮಸ್ಕರಿಸುವಂತಹ ಫೋಟೋ ಚಿತ್ರಿಸಿದಾತನನ್ನು ಗಂಗಾವತಿ ಟೌನ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಎಐಎಂಐಎಂ ಪಕ್ಷದ ಕಾರ್ಯಕರ್ತ ಮಹಮ್ಮದ್ ಮೆಹಬೂಬ್ ಎಂಬಾತ ಬಂಧಿತ ಯುವಕ.

ಈತ ಪ್ರಧಾನಿ ನರೇಂದ್ರ ಮೋದಿ ಅವರು ಆಲ್‌ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಸಂಸದ ಅಸಾದುದ್ದೀನ್ ಒವೈಸಿ ಕಾಲಿಗೆ ನಮಸ್ಕರಿಸುತ್ತಿರುವ ಚಿತ್ರ ಕ್ರಿಯೇಟ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದನು.

ಈ ಬಗ್ಗೆ ಹಿಂದೂ ಜಾಗರಣ ವೇದಿಕೆ, ಬಿಜೆಪಿ ಕಾರ್ಯಕರ್ತರು ಮಹಮ್ಮದ್ ವಿರುದ್ಧ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಇಂದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

 

Leave a Reply

Your email address will not be published. Required fields are marked *

one × one =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top