About Us Advertise with us Be a Reporter E-Paper

Breaking Newsದೇಶಪ್ರಚಲಿತ

ಮೋದಿ ಸರಕಾರ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಲಿದೆ: ಮನಮೋಹನ್ ಸಿಂಗ್

ಇಂದೋರ್: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ನಿರ್ಣಯ ಕೈಗೊಂಡಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಬುಧವಾರ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ಮೋದಿ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಸಂಸತ್ತು ಮತ್ತು ಸಿಬಿಐನಂತಹ ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಗಳ ನಂಬಿಕೆಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಸರಕಾರ ಪ್ರಜಾಪ್ರಭುತ್ವವನ್ನು ಎಚ್ಚರಿಕೆಯಿಂದ ಮತ್ತು ವ್ಯವಸ್ಥಿತವಾಗಿ ದುರ್ಬಲಗೊಳಿಸುವ ಪ್ರಯತ್ನ ಮಾಡುತ್ತಿದೆ. ದೇಶದ ಕಾನೂನು ಅಪಾಯದಲ್ಲಿದ್ದು, ಈ ಪರಿಸ್ಥಿತಿ ಬದಲಾಗದಿದ್ದರೆ ಇತಿಹಾಸ ನಮ್ಮನ್ನು ಕ್ಷಮಿಸಲ್ಲ ಎಂದಿದ್ದಾರೆ. ಇದೇ ವೇಳೆ ನೋಟು ಅಮಾನ್ಯೀಕರಣ ಒಂದು ’ಸಂಘಟಿತ ಲೂಟಿ ಮತ್ತು ಕಾನೂನು ಬಾಹಿರ ಲೂಟಿ’ ಎಂದು ಮಾಜಿ ಪ್ರಧಾನಿ ದೂರಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close