ಹಿಟ್ ಆ್ಯಂಡ್ ರನ್ ಪ್ರಕರಣ; ದಿವ್ಯಾ ಸುರೇಶ್ ಏನಂದ್ರು.?
ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 4ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ ಎಂದಿದ್ದಾರೆ.