ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Chikkanna: ಹಸೆಮಣೆ ಏರಲು ಸಜ್ಜಾದ ನಟ ಚಿಕ್ಕಣ್ಣ; ಹುಡುಗಿ ಯಾರು? ಮದುವೆ ಯಾವಾಗ?

ಖ್ಯಾತ ಹಾಸ್ಯ ನಟ ಚಿಕ್ಕಣ್ಣ (Actor Chikkanna) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಹಸೆಮಣೆ ಏರಲು ಸಜ್ಜಾದ ನಟ ಚಿಕ್ಕಣ್ಣ; ಹುಡುಗಿ ಯಾರು?

-

Vishakha Bhat Vishakha Bhat Sep 1, 2025 10:26 AM

ಬೆಂಗಳೂರು: ಖ್ಯಾತ ಹಾಸ್ಯ ನಟ ಚಿಕ್ಕಣ್ಣ (Actor Chikkanna) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿ ಪಾವನಾ ಎಂಬುವವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾವನಾ ಕೂಡ ಪಾಲ್ಗೊಂಡಿದ್ದರು. ಪಾವನಾ, ಉದ್ಯಮಿಯಾಗಿದ್ದಾರೆ. ಮೆಕಾನಿಕಲ್‌ ಇಂಜಿನಿಯರ್‌ ಎಂದು ಕೂಡ ತಮ್ಮ ಬಯೋದಲ್ಲಿ ಪಾವನಾ ಬರೆದುಕೊಂಡಿದ್ದಾರೆ.

ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆಯ ನಿಶ್ಚಯವಾಗಿದೆ. ನಿಶ್ಚಿತಾರ್ಥ ಹಾಗೂ ಮದುವೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಆದರೆ ಶೀಘ್ರದಲ್ಲೇ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದೆ ಎಂದು ಹೇಳಲಾಗುತ್ತಿದೆ. ಚಿಕ್ಕಣ್ಣ ಹಾಗೂ ಪಾವನಾ ಅವರ ಮದುವೆಯ ನಿಶ್ಚಯವಾಗಿದೆ. ನಿಶ್ಚಿತಾರ್ಥ ಹಾಗೂ ಮದುವೆ ದಿನಾಂಕದ ಬಗ್ಗೆ ಅಧಿಕೃತ ಘೋಷಣೆಯಾಗಿಲ್ಲ. ಆದರೆ ಶೀಘ್ರದಲ್ಲೇ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Anchor Anushree: ಆ್ಯಂಕರ್ ಅನುಶ್ರೀ-‌ ರೋಷನ್ ಮದುವೆ ಇನ್ವಿಟೇಶನ್‌ ರಿವೀಲ್‌, ʼಏಕಾಂಗಿ ನಂತರ ಈಗ ಅರ್ಧಾಂಗಿʼ ಎಂದ ಅನುಶ್ರೀ

ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದೆ. ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ ನಡೆದಿದೆ. ಯುವತಿಗೆ ಹೂ ಮುಡಿಸಿ ಮದುವೆ ನಿಶ್ಚಯಿಸಲಾಗಿದೆ. ಕಿರುತೆರೆ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಹಾಸ್ಯನಟನಾಗಿ ಗುರಿತಿಸಿಕೊಂಡಿದ್ದಾರೆ. 2024 ರಲ್ಲಿ ಬಿಡುಗಡೆಯಾದ 'ಉಪಾಧ್ಯಕ್ಷ' ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣಪ್ರಮಾಣದ ನಾಯಕನಾಗಿ ಯಶಸ್ಸು ಕಂಡರು. ಚಿಕ್ಕಣ್ಣ ಅವರು ಶಿವರಾಜ್‌ಕುಮಾರ್, ಯಶ್‌, ದರ್ಶನ್‌, ಸುದೀಪ್‌ರಂತಹ ಸ್ಟಾರ್‌ ನಟರ ಜೊತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.