Actor Darshan: ಕೊನೆಗೂ ನಿಟ್ಟುಸಿರು ಬಿಟ್ಟ ನಟ ದರ್ಶನ್; ಆದರೆ ಇರಲಿವೆ ಈ ಷರತ್ತುಗಳು
Actor Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy case) ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಪರದಾಡುತ್ತಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ನವೆಂಬರ್ 07) ಅರ್ಜಿಯ ಕುರಿತು ಆದೇಶ ಹೊರಡಿಸಿದ್ದು, ದರ್ಶನ್ಗೆ (Darshan) ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೆಲ ಷರತ್ತುಗಳ ಅನ್ವಯ ಅವಕಾಶ ಮಾಡಿಕೊಡಲಾಗಿದೆ.
ನಟ ದರ್ಶನ್ -
ರೇಣುಕಾಸ್ವಾಮಿ ಪ್ರಕರಣದಲ್ಲಿ (Renukaswamy case) ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಪರದಾಡುತ್ತಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ನವೆಂಬರ್ 07) ಅರ್ಜಿಯ ಕುರಿತು ಆದೇಶ ಹೊರಡಿಸಿದ್ದು, ದರ್ಶನ್ಗೆ (Darshan) ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಕೆಲ ಷರತ್ತುಗಳ ಅನ್ವಯ ಅವಕಾಶ ಮಾಡಿಕೊಡಲಾಗಿದೆ.
ನ್ಯಾ.ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ಕುರಿತು ಕೋರ್ಟ್ ಜೈಲು ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದೆ. ನಟ ದರ್ಶನ್ ಬೆನ್ನು ನೋವಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸೂಚಿಸಿದೆ. ದರ್ಶನ್ ಅವರು ಫಿಸಿಯೋಥೆರಪಿಗಾಗಿ ಹೊರಗಿನ ಆಸ್ಪತ್ರೆ ಮೂಲಕ ಅಲ್ಲದೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿಯನ್ನು ನೀಡಲಾಗಿದೆ.
ಇದನ್ನೂ ಓದಿ: Bigg Boss Kannada 13: ಜಗದೀಶ್ಗೆ ಕಿಚ್ಚ ಸುದೀಪ್ ಕ್ಲಾಸ್, ನಂಬರ್ 1 ಸ್ಥಾನಕ್ಕಾಗಿ ಮನೆಯವರ ನಡುವೆ ಫೈಟ್!
ಫಿಸಿಯೋಥೆರಪಿ ಹಾಗೂ ಬೆನ್ನು ನೋವಿಗೆ ಸಂಬಂಧಿಸಿದ ಇತರೆ ಚಿಕಿತ್ಸೆಗಳನ್ನು ಸಹ ದರ್ಶನ್ ಅವರು ಜೈಲಿನ ಆವರಣದಲ್ಲಿಯೇ ಪಡೆಯಬಹುದಾಗಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಜೈಲಧಿಕಾರಿಗಳಿಗೆ ಸೂಚನೆ ನೀಡಿದೆ.ದರ್ಶನ್ ಅರ್ಜಿ ಕುರಿತು ವಾದ ಮಂಡನೆಯಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು
ನಟ ದರ್ಶನ್ಗೆ ನಿಜವಾಗಿಯೂ ಬೆನ್ನು ನೋವಿನ ಸಮಸ್ಯೆ ಇದ್ದರೆ ವೈದ್ಯಕೀಯ ದಾಖಲೆ ನೀಡಲಿ. ಕಳೆದ ಬಾರಿ ಜಾಮೀನು ಪಡೆಯಲು ಬೆನ್ನು ನೋವಿನ ಸಮಸ್ಯೆ ಹೇಳಿದ್ದರು. ದರ್ಶನ್ಗೆ ಸರ್ಜರಿ ಅಗತ್ಯವಿದೆ, ಇಲ್ಲದಿದ್ದರೆ ತೀರಾ ಸಮಸ್ಯೆಯಾಗಲಿದೆ ಎಂದು ಹೇಳಿದ್ದರು.
ನಟ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ಕಳೆದ 15 ತಿಂಗಳುಗಳಿಂದ ಜೈಲಿನಲ್ಲಿರುವ ದರ್ಶನ್ ನೆಲದ ಮೇಲೆ ಹಾಸಿಗೆ ಹಾಕಿಕೊಂಡು ಮಲಗುತ್ತಿದ್ದಾರೆ. ಜೊತೆಗೆ ಚಳಿಗಾಲದ ಪರಿಣಾಮ ಬೆನ್ನು ನೋವು ಮತ್ತೆ ಕಾಣಿಸಿಕೊಂಡಿದ್ದು, ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು.
ಇದನ್ನೂ ಓದಿ: Bigg Boss Kannada 13: ಈ ವಾರದ ಕ್ಯಾಪ್ಟನ್ ಯಶಸ್, ಉತ್ತಮ ಪಟ್ಟ ಪಡೆದ ತಾಂಡವ್
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್ಪಿಪಿ ಈ ಹಿಂದೆಯೂ ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಜಾಮೀನು ಪಡೆದಿದ್ದರು. ಆದರೆ ಆ ಸಂದರ್ಭದಲ್ಲಿ ಚಿಕಿತ್ಸೆ ಪಡೆಯುವುದಕ್ಕಿಂತ ಕಾರ್ಯಕ್ರಮಗಳು ಹಾಗೂ ಸಿನಿಮಾ ಚಿತ್ರೀಕರಣಗಳಲ್ಲಿ ಭಾಗವಹಿಸಿದ್ದರು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ, ದರ್ಶನ್ ಅವರಿಗೆ ಜೈಲಿನಲ್ಲಿಯೇ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಆದೇಶಿಸಿದೆ.