ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Actor Yash: ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ನಿಂದ ಬಿಗ್‌ ಸರ್‌ಪ್ರೈಸ್‌? ವಿಶೇಷ ಏನು?

Actor Yash: ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಒಂದು ಪಿರಿಯಡ್ ಗ್ಯಾಂಗ್‌ಸ್ಟರ್ ಸಿನಿಮಾ. ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ದ್ವಿಪಾತ್ರದಲ್ಲಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಕೂಡ ನಟಿಸುತ್ತಿದ್ದಾರೆ.

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ನಿಂದ ಬಿಗ್‌ ಸರ್‌ಪ್ರೈಸ್‌? ವಿಶೇಷ ಏನು?

ನಟ ಯಶ್‌ -

Yashaswi Devadiga
Yashaswi Devadiga Jun 3, 2026 7:42 PM

ರಾಕಿಂಗ್ ಸ್ಟಾರ್ ಯಶ್ (Yash) ಅವರ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ರಿಲೀಸ್‌ಗೆ ಸಂಪೂರ್ಣವಾಗಿ ಸಿದ್ಧವಾಗಿದೆ. ಆದರೆ, ಚಿತ್ರಮಂದಿರಗಳಲ್ಲಿ (Theatre) ಬಿಡುಗಡೆ ಮಾಡಲು ಚಿತ್ರತಂಡಕ್ಕೆ ಸರಿಯಾದ ದಿನಾಂಕ ಸಿಗುತ್ತಿಲ್ಲ. ಮೊದಲು ಈ ಸಿನಿಮಾವನ್ನು ಮಾರ್ಚ್ 19 ರಂದು ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ನಂತರ ಜೂನ್ 4 ರಂದು ರಿಲೀಸ್ ಮಾಡುವ ಯೋಚನೆ ಇತ್ತು, ಆದರೆ ಆ ದಿನಾಂಕವನ್ನೂ ಪೋಸ್ಟ್‌ಪೋನ್ (Postone) ಮಾಡಬೇಕಾಯಿತು. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಅಂದು ಟಾಕ್ಸಿಕ್‌ ಕಡೆಯಿಂದ ಸಿಗಲಿದೆಯಾ ಬಿಗ್‌ ಅಪ್‌ಡೇಟ್‌?

ಜೂನ್ 8ರಂದು ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಜನ್ಮದಿನ. ಜೂನ್ 8ರಂದು ‘ಟಾಕ್ಸಿಕ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗುವ ದಟ್ಟ ಸಾಧ್ಯತೆಗಳಿವೆ ಎನ್ನಲಾಗಿದೆ.ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಗಿಫ್ಟ್ ನೀಡಲು ಮೇಕರ್ಸ್ ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: Amruthadhaare Serial: ಕೆಡಿ ಜೈದೇವ್‌ ಮಾಸ್ಟರ್‌ ಪ್ಲ್ಯಾನ್‌; ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ!

ಸಿನಿಮಾ ಅನೌನ್ಸ್ ಆದ ದಿನದಿಂದಲೂ ಅಭಿಮಾನಿಗಳು ಈ ಚಿತ್ರದ ರಿಲೀಸ್ ದಿನಕ್ಕಾಗಿ ಕಾಯುತ್ತಿದ್ದಾರೆ. ಈಗ ಜೂನ್ 8ರಂದು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹುಟ್ಟುಹಬ್ಬದ ದಿನ ಬಿಗ್ ಅಪ್​​ಡೇಟ್ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಆಗಸ್ಟ್ 15 ರಂದು ಬಿಡುಗಡೆಯಾಗುವ ಸಾಧ್ಯತೆ

ವರದಿಯ ಪ್ರಕಾರ, ಯಶ್ ಅವರ 'ಟಾಕ್ಸಿಕ್' ಸಿನಿಮಾ 2026ರ ಸ್ವಾತಂತ್ರ್ಯ ದಿನಾಚರಣೆಯಂದು, ಅಂದರೆ ಆಗಸ್ಟ್ 15 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ನಿರ್ಮಾಪಕರು ಈ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡಲು ಬಹಳ ದಿನಗಳಿಂದ ಯೋಚಿಸುತ್ತಿದ್ದರು.

ಗೀತು ಮೋಹನ್‌ದಾಸ್ ನಿರ್ದೇಶನದ 'ಟಾಕ್ಸಿಕ್' ಒಂದು ಪಿರಿಯಡ್ ಗ್ಯಾಂಗ್‌ಸ್ಟರ್ ಸಿನಿಮಾ. ಈ ಚಿತ್ರದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಯಶ್ ದ್ವಿಪಾತ್ರದಲ್ಲಿ ನಟಿಸುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಕೂಡ ನಟಿಸುತ್ತಿದ್ದಾರೆ.

ಇದನ್ನೂ ಓದಿ: Kangana Ranaut: ಇದೊಂದೇ ಕಾರಣಕ್ಕೆ ಬಾಲಿವುಡ್‌ನಿಂದ ದೂರ ಇರುವೆ; ಕಂಗನಾ

ವೆಂಕಟ್ ಕೆ ನಾರಾಯಣ ಮತ್ತು ಯಶ್ ಅವರು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.