Akshay Kumar: ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಕಾರು ಭೀಕರ ಅಪಘಾತ! ನಜ್ಜುಗುಜ್ಜಾದ ಆಟೋ
Akshay Kumar's convoy vehicle : ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ನಟ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಮುಂದೆ ಬೇರೆ ಕಾರಿನಲ್ಲಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪ್ರಾಥಮಿಕ ವರದಿ ಪ್ರಕಾರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳಿಯರು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.
ಅಕ್ಷಯ್ ಕುಮಾರ್ -
ಸೋಮವಾರ ರಾತ್ರಿ ಮುಂಬೈನ ಜುಹು ಪ್ರದೇಶದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರ ಬೆಂಗಾವಲು ವಾಹನವು ಮರ್ಸಿಡಿಸ್ ಕಾರು (Mercedes car) ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ನಟ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಮುಂದೆ ಬೇರೆ ಕಾರಿನಲ್ಲಿದ್ದರು.ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ (Accident) ಎಂದು ಮೂಲಗಳು ದೃಢಪಡಿಸಿವೆ. ಪ್ರಾಥಮಿಕ ವರದಿ ಪ್ರಕಾರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಸ್ಥಳಿಯರು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ.
ಆಟೋ ರಿಕ್ಷಾಕ್ಕೆ ಡಿಕ್ಕಿ
ಈ ಅಪಘಾತದಲ್ಲಿ ಮರ್ಸಿಡಿಸ್ ಕಾರು ವೇಗ ಹೆಚ್ಚಿಸಿಕೊಂಡು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ನಂತರ ಅಕ್ಷಯ್ ಅವರ ಬೆಂಗಾವಲು ಕಾರು ಇನ್ನೋವಾಕ್ಕೆ ಡಿಕ್ಕಿ ಹೊಡೆದಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ಇಲ್ಲಿಯವರೆಗೆ ಯಾವುದೇ ಅಧಿಕೃತ ವರದಿ ದಾಖಲಾಗಿಲ್ಲ. ಆಟೋ ಚಾಲಕ ಮತ್ತು ಪ್ರಯಾಣಿಕನನ್ನು ವೈದ್ಯಕೀಯ ಸಹಾಯಕ್ಕೆ ಕರೆದೊಯ್ಯಲಾಯಿತು.
ಇದನ್ನೂ ಓದಿ: Kavya Bigg Boss: ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ ! ಅಶ್ವಿನಿಗೆ ಪರೋಕ್ಷವಾಗಿ ಟಾಂಗ್ ಕೊಟ್ರಾ ಕಾವ್ಯಾ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಇನ್ನು ಪ್ರತ್ಯಕ್ಷದರ್ಶಿಗಳ ಪ್ರಕಾರ ಈ ಅಪಘಾತದಲ್ಲಿ ಅಕ್ಷಯ್ ಕುಮಾರ್ ಅವರ ಬೆಂಗಾಲಿನ ವಾಹನದ ಯಾವ ತಪ್ಪು ಕೂಡ ಇಲ್ಲ. ಬದಲಿಗೆ ಅತಿ ವೇಗವಾಗಿ ಬೇರೊಬ್ಬರು ತಮ್ಮ ಕಾರು ಚಲಾಯಿಸಿಕೊಂಡು ಬಂದು ಆಟೋ ರಿಕ್ಷಾಗೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಆಟೋ ಅಕ್ಷಯ್ ಕುಮಾರ್ ಅವರ ಬೆಂಗಾವಲು ವಾಹನಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.
#AkshayKumar - Akshay Kumar’s car met with an accident in Mumbai’s Juhu area on Monday night.
— Ravi Chaudhary (@BURN4DESIRE1) January 20, 2026
A speeding Mercedes first hit an auto-rickshaw, which then lost control and collided with Akshay Kumar’s car.
Reports say Akshay Kumar and his wife Twinkle Khanna were traveling in a car… pic.twitter.com/hqNzbSHJG1
ಅಕ್ಷಯ್ ತಂಡವು ಇನ್ನೂ ಹೇಳಿಕೆ ನೀಡಿಲ್ಲ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಇದುವರೆಗೂ ಈ ಭೀಕರ ಅಪಘಾತದಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಅಕ್ಷಯ್ ಕುಮಾರ್ ಅಥವಾ ಟ್ವಿಂಕಲ್ ಖನ್ನಾ ಈ ಕುರಿತು ಇನ್ನೂ ಪ್ರತಿಕ್ರಿಯೆಯನ್ನು ನೀಡಿಲ್ಲ. ಸದ್ಯ ಈ ರಣಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ: Viral News: ಅಕ್ಷಯ್ ಖನ್ನಾ ವೈರಲ್ ಡ್ಯಾನ್ಸ್‌ಗೆ ದೆಹಲಿ ಪೊಲೀಸರು ಫಿದಾ; ಜಾಗೃತಿ ಮೂಡಿಸಲು ಏನ್ ಮಾಡಿದ್ರು ಗೊತ್ತಾ?
ಕೆಲಸದ ವಿಚಾರಕ್ಕೆ ಬಂದರೆ, ಪ್ರಿಯದರ್ಶನ್ ಅವರ ಮುಂಬರುವ ಚಿತ್ರ ಹೈವಾನ್ ನಲ್ಲಿ ಸೈಫ್ ಅಲಿ ಖಾನ್ ಮತ್ತು ಸಯಾಮಿ ಖೇರ್ ಅವರೊಂದಿಗೆ ಅಕ್ಷಯ್ ಕಾಣಿಸಿಕೊಳ್ಳಲಿದ್ದಾರೆ . ಕೆವಿಎನ್ ಪ್ರೊಡಕ್ಷನ್ಸ್ ಥೆಸ್ಪಿಯನ್ ಫಿಲ್ಮ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ ಈ ಯೋಜನೆಯು 2026 ರಲ್ಲಿ ಥಿಯೇಟ್ರಿಕಲ್ ಬಿಡುಗಡೆಯ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ.